ಮಾಲೂರು ಶಾಸಕ ನಂಜಗೌಡ ಸೇರಿ ಕುಟುಂಬದ 6 ಮಂದಿಗೆ ಕೊರೋನಾ ಸೋಂಕು ಧೃಡ
ಮಾಲೂರು ಶಾಸಕ ನಂಜೇಗೌಡ ಹಾಗೂ ಅವರ ಕುಟುಂಬದ ಆರು ಸದಸ್ಯರಿಗೆ ಕೊರೋನಾ ವೈರಸ್ ಸೋಂಕು ತಗುಲಿರೋದು ದೃಢಪಟ್ಟಿದೆ.

ಕೋಲಾರ: ಮಾಲೂರು ಶಾಸಕ ನಂಜೇಗೌಡ ಹಾಗೂ ಅವರ ಕುಟುಂಬದ ಆರು ಸದಸ್ಯರಿಗೆ ಕೊರೋನಾ ವೈರಸ್ ಸೋಂಕು ತಗುಲಿರೋದು ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಶಾಸಕರು ನಮಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹಾ ಕೊರೋನಾ ಪರೀಕ್ಷೆಯಲ್ಲಿ ನನಗೆ, ನನ್ನ ಧರ್ಮಪತ್ನಿಗೆ, ನನ್ನ ಕಿರಿಯ ಮಗ ಸುನೀಲ್ ಸೇರಿದಂತೆ ಮನೆಯ ಒಟ್ಟು 6 ಸದಸ್ಯರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ತಮಗೆ ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ಕೊರೋನಾ ವೈರಸ್ ಸೋಂಕು ತಗುಲಿರೋದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇವೆ ಎಂದು ಶಾಸಕ ನಂಜೇಗೌಡರು ತಿಳಿಸಿದ್ದಾರೆ.
ನಿಮ್ಮ ಪ್ರೀತಿ ಮತ್ತು ಆಶೀರ್ವಾದದಿಂದ ನಾನು ಶೀಘ್ರದಲ್ಲೇ ಗುಣಮುಖನಾಗಿ ಹಿಂತಿರುಗಲಿದ್ದು, ನನ್ನೊಂದಿಗೆ ಸಂಪರ್ಕಕದಲ್ಲಿದ್ದ ಎಲ್ಲರೂ ಒಂದು ಬಾರಿ ಕೊರೋನಾ ವೈರಸ್ ಪರೀಕ್ಷೆ ಮಾಡಿಕೊಳ್ಳುವುದರ ಜೊತೆಗೆ ಕ್ವಾರಂಟೈನ್ ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


