ರಾಯಚೂರು: ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ. 3 ಸಾವು
ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ.

ರಾಯಚೂರು: ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ.
ಅಂತ್ಯಸಂಸ್ಕಾರ ಮುಗಿಸಿ ಬರುವಾಗ ನಡೆದ ಅಪಘಾತದಲ್ಲಿ ಪದ್ದಮ್ಮ (40), ಅಂಬಣ್ಣ (65), ರಾಮಣ್ಣ(99) ಎನ್ನುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ, ಶಿವನಗೌಡ ಹಾಗೂ ಗುಂಡಪ್ಪ ಎಂಬಿಬ್ಬರೂ ಸಹ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲಾ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವರಾಜ್ ಎನ್ನುವವರ ಅಂತ್ಯ ಸಂಸ್ಕಾರಕ್ಕೆ ತೆರಳಿದ್ದರೆನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


