ರಾಜ್ಯ

ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರದ ಕಸರತ್ತು: ಕೋರ್ಟ್ ಮೊರೆ ಹೋಗುವ ಸಾಧ್ಯತೆ

ಬಿಬಿಎಂಪಿ ಚುನಾವಣೆ ಮುಂದೂಡಲು ಸರಕಾರ ಕಸರತ್ತು ಆರಂಭಿಸಿದೆ. ಇದಕ್ಕಾಗಿ ವಾರ್ಡ್‌ ಮರು ವಿಂಗಡಣೆ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ.

ಬಿಬಿಎಂಪಿ ಚುನಾವಣೆ ಮುಂದೂಡಲು ಸರ್ಕಾರದ ಕಸರತ್ತು: ಕೋರ್ಟ್ ಮೊರೆ ಹೋಗುವ ಸಾಧ್ಯತೆ
ಬಿಬಿಎಂಪಿ ಕಚೇರಿ
Published On :

ಬೆಂಗಳೂರು : ಬಿಬಿಎಂಪಿ ಚುನಾವಣೆ ಮುಂದೂಡಲು ಸರಕಾರ ಕಸರತ್ತು ಆರಂಭಿಸಿದೆ. ಇದಕ್ಕಾಗಿ ವಾರ್ಡ್‌ ಮರು ವಿಂಗಡಣೆ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಅನೌಪಚಾರಿಕವಾಗಿ ಈ ವಿಷಯದ ಬಗ್ಗೆ ಚರ್ಚೆ ನಡೆಸಲಾಗಿದ್ದು, ಚುನಾವಣೆ ಮುಂದೂಡಲು ಅಗತ್ಯವಾದ ಮಾರ್ಗಗಳ ಬಗ್ಗೆ ಚರ್ಚೆ ನಡೆದಿದೆ. ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ  ಜೆ.ಸಿ.ಮಾಧುಸ್ವಾಮಿ, ವಾರ್ಡ್‌ ಮರು ವಿಂಗಡಣೆಯ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು ಸದ್ಯ ಇರುವ 198 ವಾರ್ಡ್‌ಗಳನ್ನು 225 ಕ್ಕೆ ಏರಿಕೆ ಮಾಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಶುಕ್ರವಾರ ನಡೆಯಲಿರುವ ಜಂಟಿ ಸದನ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಸದ್ಯ ಬೆಂಗಳೂರಿನಲ್ಲಿ 198 ವಾರ್ಡ್‌ಗಳಿವೆ ಇವನ್ನು 225 ಕ್ಕೆ ಹೆಚ್ಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ, 40 ರಿಂದ 47 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್‌ನಂತೆ ವಿಂಗಡಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದರು. ಅಲ್ಲದೆ ಬಿಬಿಎಂಪಿ 8 ವಲಯಗಳನ್ನು‌ 15ಕ್ಕೆ ಹೆಚ್ಚಿಸುವ ಬಗ್ಗೆಯೂ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಮಾಹಿತಿ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿಈಗ 198 ವಾರ್ಡ್‌ಗಳಿವೆ. ಬದಲಾದ ಪರಿಸ್ಥಿತಿಯಲ್ಲಿಇದನ್ನು 225 ವಾರ್ಡ್‌ಗಳಿಗೆ ವಿಸ್ತರಿಸಬೇಕಾಗುತ್ತದೆ. ಜನಸಂಖ್ಯೆ, ಜನಸಾಂದ್ರತೆ ದೃಷ್ಟಿಯಲ್ಲಿಟ್ಟುಕೊಂಡು 40ರಿಂದ 42 ಸಾವಿರ ಜನರಿಗೆ ಒಂದು ವಾರ್ಡ್‌ ರಚನೆ ಮಾಡಬೇಕೆಂಬ ಪ್ರಸ್ತಾಪ ಇದೆ. ಹೀಗಾಗಿ ವಾರ್ಡ್‌ ಪುನಾರಚನೆಯಾದ ಬಳಿಕವೇ ಚುನಾವಣೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು. ವಾರ್ಡ್‌ ಮರು ವಿಂಗಡಣೆ ಮಾಡುವ ಜತೆಗೆ ಈಗಿರುವ 8 ವಲಯಗಳನ್ನು 15ಕ್ಕೆ ವಲಯಕ್ಕೆ ಏರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.