ರಾಜ್ಯ

ಸುಶಾಂತ್ ಸಾವು ಪ್ರಕರಣ: ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ಎನ್‍ಸಿಬಿ ನೋಟಿಸ್!

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಎನ್‍ಸಿಬಿ ಅಧಿಕಾರಿಗಳು ಯಶಸ್ ಗೆ ನೋಟಿಸ್ ನೀಡಿದೆ.

ಸುಶಾಂತ್ ಸಾವು ಪ್ರಕರಣ: ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ಎನ್‍ಸಿಬಿ ನೋಟಿಸ್!
ಯಶಸ್
Published On :

ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಎನ್‍ಸಿಬಿ ಅಧಿಕಾರಿಗಳು ಯಶಸ್ ಗೆ ನೋಟಿಸ್ ನೀಡಿದೆ. 

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಗೆ ಮುಂಬೈ ಡ್ರಗ್ಸ್ ಜಾಲದ ನಂಟಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಎನ್ ಸಿಬಿ ಅಧಿಕಾರಿಗಳ ತಂಡ ಕಾರ್ಪೋರೇಟರ್ ಕೇಶವಮೂರ್ತಿ ಮನೆ ಮೇಲೆ ದಾಳಿ ನಡೆಸಿ ಪುತ್ರ ಯಶಸ್ ಗೆ ನೋಟಿಸ್ ನೀಡಿದೆ. 

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಡ್ರಗ್ಸ್ ಮಾಫಿಯಾ ನಂಟಿದೆ ಎಂಬುದು ಪತ್ತೆಯಾದ ನಂತರ ನಾರ್ಕೋಟಿಕ್ಸ್ ಕಂಟ್ರೋಲರ್ ಬ್ಯೂರೋ(ಎನ್ಸಿಬಿ) ಅಖಾಡಕ್ಕೆ ಇಳಿದಿತ್ತು. 

ಮುಂಬೈನ ಡ್ರಗ್ ಪೆಡ್ಲರ್ ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ. ಮೊಹಮ್ಮದ್ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಮೊಹಮ್ಮದ್ ನ ವಿಚಾರಣೆ ವೇಳೆ ಯಶಸ್ ಹೆಸರು ಹೇಳಿರುವುದರಿಂದ ಎನ್ ಸಿಬಿ ಯಶಸ್ ಗೆ ನೋಟಿಸ್ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.