ಶಾಲೆಗಳ ಪುನರಾರಂಭಕ್ಕೆ ಸರ್ಕಾರದ ಬಳಿ ಸೂಕ್ತ ರೋಡ್ ಮ್ಯಾಪ್ ಇದೆ: ವಿಪಕ್ಷಗಳ ಟೀಕೆಗೆ ಸಚಿವ ಸುರೇಶ್ ಕುಮಾರ್ ಕಿಡಿ
ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಹಾಯ ಮಾಡಲು, ಶಾಲೆಗಳ ಪುನರಾರಂಭಿಸಲು ಸರ್ಕಾರದ ಬಳಿ ಸೂಕ್ತ ರೋಡ್ ಮ್ಯಾಪ್ ಇಲ್ಲ ಎಂಬ ವಿರೋಧ ಪಕ್ಷಗಳ ಆರೋಪದ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಿಡಿಕಾರಿದ್ದಾರೆ.

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಹಾಯ ಮಾಡಲು, ಶಾಲೆಗಳ ಪುನರಾರಂಭಿಸಲು ಸರ್ಕಾರದ ಬಳಿ ಸೂಕ್ತ ರೋಡ್ ಮ್ಯಾಪ್ ಇಲ್ಲ ಎಂಬ ವಿರೋಧ ಪಕ್ಷಗಳ ಆರೋಪದ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಿಡಿಕಾರಿದ್ದಾರೆ.
ವಿರೋಧ ಪಕ್ಷಗಳ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರಿ ಶಾಲೆಗಳು ಆನ್'ಲೈನ್ ತರಗತಿಗಳನ್ನು ಆರಂಭಿಸಲು ಸಾಧ್ಯವಾಗುವುದಿಲ್ಲ. ಅದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ. ಇದೀಗ ನಮಗೂ ಆ ಬಗ್ಗೆ ಆಸಕ್ತಿ ಇಲ್ಲ. ಆನ್‌ಲೈನ್ ಶಿಕ್ಷಣದಲ್ಲಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳೊಂದಿಗೆ ನೇರ ಪರಸ್ಪರ ಸಂಪರ್ಕ ಇರುವುದಿಲ್ಲ. ಹೀಗಾಗಿಯೇ ನಾವು ವಿದ್ಯಾಗಮವನ್ನು ಆರಂಭಿಸಿದ್ದೇವೆ. ಕಾಂಗ್ರೆಸ್ ನಾಯಕರನ್ನು ಬಿಟ್ಟು ಪ್ರತೀಯೊಬ್ಬರೂ ನಮ್ಮ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ಆನ್'ಲೈನ್ ಶಿಕ್ಷಣ ವ್ಯವಸ್ಥೆಯಲ್ಲಿ ಭಾಗಿಯಾಗಲು ಸಾಧ್ಯವಾಗದ ಮಕ್ಕಳು ಶಾಲೆಯನ್ನೇ ಬಿಡುತ್ತಿದ್ದಾರೆಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರತೀ ಜಿಲ್ಲೆಯಲ್ಲಿಯೂ ಸರ್ಕಾರಿ ಶಾಲೆಗಳಲ್ಲಿ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಸತ್ಯ ಎಂದು ತಿಳಿಸಿದ್ದಾರೆ.
ಅನುದಾನಿತವಲ್ಲದ ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಕಳೆದ ನಾಲ್ಕು ತಿಂಗಳುಗಳಿಂದ ವೇತನ ಪಡೆದಿಲ್ಲ. ಹೀಗಾಗಿ ವಿಶೇಷ ಪ್ಯಾಕೇಜ್'ಗಾಗಿ ಆಗ್ರಹಿಸುತ್ತಿದ್ದಾರೆ. ಶಿಕ್ಷಕರಿಗೆ ಸಾಧ್ಯವಾದಷ್ಟು ಸಹಾಯಗಳನ್ನು ಸರ್ಕಾರ ಮಾಡಲು ಪ್ರಯತ್ನಿಸುತ್ತಿದೆ. ಶಾಲೆಗಳ ಪುನರಾರಂಭಿಸಲು ಸರ್ಕಾರದ ಬಳಿ ಸೂಕ್ತ ರೋಡ್ ಮ್ಯಾಪ್ ಇದೆ. ಕಾಂಗ್ರೆಸ್ ನಾಯಕರಿಗೆ ಆ ಬಗ್ಗೆ ವಿವರವಾಗಿ ತಿಳಿಸಲು ನಾನು ಇಚ್ಛಿಸುತ್ತೇನೆ. ಸರ್ಕಾರದ ರೋಡ್ ಮ್ಯಾಪ್ ಬಗ್ಗೆ ನಮ್ಮ ಶಿಕ್ಷಕರಿಗೂ ಸ್ಪಷ್ಟ ಚಿತ್ರಣಗು ತಿಳಿದಿದೆ. ಈ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸುತ್ತಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


