ಪಾರ್ಟಿಗೆ ಹೋದಾಗಲೆಲ್ಲಾ ಡ್ರಗ್ಸ್ ಸೇವನೆ ಮಾಡುವಂತೆ ಸ್ನೇಹಿತ ಬಲವಂತ ಮಾಡುತ್ತಿದ್ದ: ವಿಚಾರಣೆ ವೇಳೆ ನಟಿ ರಾಗಿಣಿ ಹೇಳಿಕೆ
ಯಾವುದೇ ಪಾರ್ಟಿಗೆ ಹೋದರೂ ಸ್ನೇಹಿತ ರವಿಶಂಕರ್ ಡ್ರಗ್ಸ್ ಸೇವನೆ ಮಾಡುವಂತೆ ಬಲವಂತ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು: ಯಾವುದೇ ಪಾರ್ಟಿಗೆ ಹೋದರೂ ಸ್ನೇಹಿತ ರವಿಶಂಕರ್ ಡ್ರಗ್ಸ್ ಸೇವನೆ ಮಾಡುವಂತೆ ಬಲವಂತ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಯವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ನಿನ್ನೆ ಕೂಡ ಅಧಿಕಾರಿಗಳು ರಾಗಿಣಿಯವರನ್ನು ವಿಚಾರಣೆಗೊಳಪಡಿಸಿದ್ದು, ತನಿಖೆ ವೇಳೆ ರಾಗಿಣಿಯವರು ಸಹಕಾರ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಭಾನುವಾರ ರಾಗಿಣಿಯವರನ್ನು 4 ತಾಸಿಗೂ ಹೆಚ್ಚು ಕಾಲ ವಿಚಾರಣೆಗೊಳಪಡಿಸಿದ್ದು, ಪೊಲೀಸರು 50 ಪ್ರಶ್ನೆಗಳುಳ್ಳ ಪ್ರಶ್ನಾವಳಿಯನ್ನು ರಚನೆ ಮಾಡಿಕೊಂಡು ವಿಚಾರಣೆ ನಡೆಸಿದ್ದಾರೆ. ಆದರೆ, ಇದರಲ್ಲಿ ಬಹುತೇಕ ಪ್ರಶ್ನೆಗಳಿಗೆ ರಾಗಿಣಿ ಉತ್ತರವನ್ನೇ ನೀಡಿಲ್ಲ. ಶುಕ್ರವಾರದ ವಿಚಾರಣೆ ವೇಳೆ ಎಲ್ಲವನ್ನೂ ಹೇಳಿದ್ದೇನೆಂದಷ್ಟೇ ಹೇಳಿದ್ದಾರೆಂದು ತಿಳಿದುಬಂದಿದೆ.
ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿರುವ ರಾಗಿಣಿ, ಪಾರ್ಟಿಗೆ ಹೋದಾಗಲೆಲ್ಲಾ ಸ್ನೇಹಿತ ರವಿಶಂಕರ್ ಡ್ರಗ್ಸ್ ತೆಗೆದುಕೊಳ್ಳುವಂತೆ ಬಲವಂತ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆನ್ನಲಾಗಿದೆ.
ಪಾರ್ಟಿ ವೇಳೆ ಡ್ರಗ್ಸ್ ಸೇವನೆ ಮಾಡುತ್ತಿರುವ ಕೆಲ ಪ್ರಮುಖ ವ್ಯಕ್ತಿಗಳನ್ನೂ ಆತ ಪರಿಚಯ ಮಾಡಿಕೊಡುತ್ತಿಲ್ಲ ಎಂದಿರುವ ರಾಗಿಣಿ ಮತ್ತಷ್ಟು ಮಾಹಿತಿ ನೀಡಲು ನಿರಾಕರಿಸಿದ್ದಾರೆಂದು ವರದಿಗಳು ತಿಳಿಸಿವೆ.
ನಾನು ಡ್ರಗ್ಸ್ ಸೇವನೆ ಮಾಡುತ್ತಿದ್ದೆ. ರವಿಶಂಕರ್ ಹಾಗೂ ರಾಹುಲ್ ಶೆಟ್ಟಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿಚಾರ ತನಗೆ ತಿಳಿದಿಲ್ಲ. ನನಗೆ ಅತೀವ್ರ ಬೆನ್ನು ನೋವಿದ್ದು, ಹೆಚ್ಚು ಸಮಯ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ತನ್ನ ಮಗಳನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ರಾಗಿಣಿ ತಾಯಿ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದು, ಈ ಮನವಿಯನ್ನು ತಿರಸ್ಕರಿಸಿರುವ ಪೊಲೀಸರು, ನ್ಯಾಯಾಲಯದಿಂದ ಅನುಮತಿ ಪಡೆಯುವಂತೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


