ಬೆಳಗಾವಿ: ಅವಶ್ಯಕತೆಯಿರುವವರಿಗೆ ಉಚಿತವಾಗಿ ಆಕ್ಸಿಜನ್ ಪೂರೈಸುತ್ತಿರುವ ಉದ್ಯಮಿ
ಕೊರೋನಾದಿಂದಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಗಾವಿಯ ಉದ್ಯಮಿಯೊಬ್ಬರು ಉಚಿತವಾಗಿ ಆಕ್ಸಿಜನ್ ಪೂರೈಸುತ್ತಿದ್ದಾರೆ.

ಬೆಳಗಾವಿ: ಕೊರೋನಾದಿಂದಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಗಾವಿಯ ಉದ್ಯಮಿಯೊಬ್ಬರು ಉಚಿತವಾಗಿ ಆಕ್ಸಿಜನ್ ಪೂರೈಸುತ್ತಿದ್ದಾರೆ.
ಬೆಳಗಾವಿಯ ಆಕ್ಸಿಜನ್ ಪ್ರೈವೇಟ್ ಲಿಮಿಟೆಡ್ ನ ಮಾಲೀಕ ವೆಂಕಟೇಶ್ ಪಾಟೀಲ್ ಅವಶ್ಯಕತೆಯಿರುವವರಿಗೆ ಖಾಲಿ ಆಕ್ಸಿಜನ್ ಸಿಲಿಂಡರ್ ಗೆ ಉಚಿತವಾಗಿ ಆಕ್ಸಿಜನ್ ತುಂಬಿಸಿಕೊಡುತ್ತಿದ್ದಾರೆ.
ಜಿಲ್ಲೆಯ ಬಡವರು ಹಾಗೂ ಅವಶ್ಯಕತೆಯಿರುವವರು ಉಚಿತವಾಗಿ ಆಕ್ಸಿಜನ್ ಪೂರೈಸುತ್ತಿದ್ದಾರೆ. ಆಮ್ಲಜನಕ ಸೈಲಿನರ್‌ಗಳ ಕೊರತೆಯು ಹಲವಾರು ಕೋವಿಡ್ ರೋಗಿಗಳು ಪ್ರಾಣವನ್ನು ಕಳೆದುಕೊಂಡಿದ್ದರು. ಹಲವು ಎನ್ ಜಿ ಓ ಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಆಕ್ಸಿಜನ್ ಸಿಲಿಂಡರ್ ಗಳನ್ನು ಅವಶ್ಯಕತೆ ಇರುವವರಿಗೆ ನೀಡುತ್ತಿದ್ದಾರೆ. ಒಮ್ಮೆ ಬಳಕೆಯಾದ ಮೇಲೆ ಫಿಲ್ಲಿಂಗ್ ಮಾಡುವುದೇ ದೊಡ್ಡ ಸವಾಲಾಗಿತ್ತು.
ಇದನ್ನು ಅರಿತ ಪಾಟೀಲ್ ಅವರು ಎನ್ ಜಿ ಓಗಳಿಂದ ಆಕ್ಸಿಜನ್ ಸಿಲಿಂಡರ್ ಗಳನ್ನು ಪಡೆದು ಅದನ್ನು ಫಿಲ್ಲಿಂಗ್ ಮಾಡಲು ಮುಂದಾಗಿದ್ದಾರೆ. ಪ್ರತಿ ಸಿಲಿಂಡರ್ ಫಿಲ್ಲಿಂಗ್ ಮಾಡಲು 260 ರು ಹಣ ಬೇಕಾಗುತ್ತದೆ. ಇದುವರೆಗೂ ಪಾಟೀಲ್ 1,882 ಆಕ್ಸಿಜನ್ ಸಿಲಿಂಡರ್ ಅನ್ನು ಉಚಿತವಾಗಿ ತುಂಬಿಸಿಕೊಟ್ಟಿದ್ದಾರೆ. ಹಲವು ಎನ್ ಜಿ ಓಗಳು ಖಾಲಿ ಸಿಲಿಂಡರ್ ನೊಂದಿಗೆ ಪಾಟೀಲ್ ಅವರನ್ನು ಭೇಟಿ ಮಾಡಿ ಆಕ್ಸಿಜನ್ ತುಂಬಿಸಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


