ರಾಜ್ಯದಲ್ಲಿ ಇಂದು ಕೊರೋನಾಗೆ 146 ಬಲಿ, ಬೆಂಗಳೂರಿನಲ್ಲಿ 3102 ಸೇರಿ 7866 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಂಗಳವಾರ ಬರೋಬ್ಬರಿ 7866 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಂಗಳವಾರ ಬರೋಬ್ಬರಿ 7866 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 146 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6680ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 55 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 146 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3102 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,53,625ಕ್ಕೆ ಏರಿಕೆಯಾಗಿದೆ.
ಇಂದು 7803 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,08573ಕ್ಕೆ ಏರಿಕೆಯಾಗಿದೆ. 96,918 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 784 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


