ಬಿಜೆಪಿ ಮಾಜಿ ಶಾಸಕ ಹಾಲಹರವಿ ಪುತ್ರ ಸೂರಜ್ ಆತ್ಮಹತ್ಯೆ
ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ: ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೂರಜ್ ಹಾಲಹರವಿ (18) ಆತ್ಮಹತ್ಯೆ ಮಾಡಿಕೊಂಡ ಶಾಸಕರ ಪುತ್ರ. ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದು, ಉಪನಗರ ಠಾಣೆ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಆತ್ಮಹತ್ಯೆಗೆ ಶರಣಾಗಿರುವ ಸೂರಜ್, ಎಲ್ಲರೊಂದಿಗೆ ಚೆನ್ನಾಗಿಯೇ ಬೆರೆಯುತ್ತಿದ್ದ. ಸದಾಕಾಲ ಲವಲವಿಕೆಯಿಂದ ಇರುತ್ತಿದ್ದನೆಂದು ಹೇಳಲಾಗಿದೆ. ಈ ಘಟನೆಯ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ತರಲಾಗಿದೆ. ಹಾಲಹರವಿ 2008ರಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಮೀಸಲು ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


