ರಾಜ್ಯದ ವಿದ್ಯಾರ್ಥಿಗಳಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ಮೀಸಲಾತಿಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಅಧ್ಯಯನ ಮಾಡಿದವರಿಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಐಯು) ನಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಅಧ್ಯಯನ ಮಾಡಿದವರಿಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಐಯು) ನಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ವಿಧಾನಸಭೆ ಜಾರಿಗೆ ತಂದ ತಿದ್ದುಪಡಿ ಕಾಯ್ದೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಬಿ.ವಿ.ನಾಗರತ್ನ, ನ್ಯಾಯಮೂರ್ತಿ ರವಿ ಹೊಸ್ಮನಿ ಅವರನ್ನೊಳಗೊಂಡ ವಿಭಾಗೀಯ ಪೀಠವು ತಿದ್ದುಪಡಿಯ ವಿರುದ್ಧಅರ್ಜಿಗಳನ್ನು ಆಲಿಸಿದ ನಂತರ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.
ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ಕಾಲ ಅಧ್ಯಯನ ಮಾಡಿದವರಿಗೆ ಎನ್‌ಎಲ್‌ಎಸ್‌ಐಯುನಲ್ಲಿ ಶೇ 25 ರಷ್ಟುಮೀಸಲಾತಿ ನೀಡಲು ರಾಜ್ಯ ವಿಧಾನಸಭೆ ಎನ್‌ಎಲ್‌ಎಸ್‌ಐಯು (ತಿದ್ದುಪಡಿ) ಕಾಯ್ದೆ 2020 ಅನ್ನು ಅಂಗೀಕರಿಸಿತು. ಇದರ ವಿರುದ್ಧ ಕಾನೂನು ವಿದ್ಯಾರ್ಥಿಗಳು ಮತ್ತು ಇತರರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


