ಡ್ರಗ್ಸ್ ದಂಧೆ ಪ್ರಕರಣ: ಸ್ಯಾಂಡಲ್'ವುಡ್ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ, ತೀವ್ರಗೊಂಡ ಶೋಧ ಕಾರ್ಯ
ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು" ಸ್ಯಾಂಡಲ್'ವುಡ್'ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಶೋಧಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ನಿವಾಸದ ಮೇಲೆ ಇಂದು ಬೆಳಗಿನ ಜಾವ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು, ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಕಳೆದ ವಾರವಷ್ಟೇ ನಟಿ ರಾಗಿಣಿ ಅವರ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ರಾಗಿಣಿಯವರನ್ನು ಬಂಧನಕ್ಕೊಳಪಡಿಸಿತ್ತು. ಇದಾದ ಬಳಿಕ ಪ್ರಕರಣ ಸಂಬಂಧ ಸಂಜನಾ ಅವರ ಹೆಸರೂ ಕೂಡ ಕೇಳಿ ಬಂದಿತ್ತು. ಆದರೆ, ಸಿಸಿಬಿ ಎಫ್ಐಆರ್'ನಲ್ಲಿ ಸಂಜನಾ ಅವರ ಹೆಸರು ಉಲ್ಲೇಖವಾಗಿರಲಿಲ್ಲ. ಆದರೆ, ಈಗ ಪೃಥ್ವಿ ಶೆಟ್ಟಿ ಎಂಬ ವ್ಯಕ್ತಿ ನೀಡಿರುವ ಹೇಳಿಕೆ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಈ ಹಿಂದೆ ಪ್ರಕರಣ ಸಂಬಂಧ ಸಿನಿ ವಿತರಕ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಪ್ರಕರಣದಲ್ಲಿ ಸಂಜನಾ ಕೂಡ ಭಾಗಿಯಾಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ನಟಿ ಹಾಗೂ ಸಂಬರಗಿ ನಡುವೆ ಈಗಲೂ ಆರೋಪ ಹಾಗೂ ಪ್ರತ್ಯಾರೋಪಗಳ ಸರಣಿ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


