ಕೊರೋನಾ: ಸಾಮಾಜಿಕ ಅಂತರ ನಿಯಮ ಕೈಬಿಟ್ಟ ಕೆಎಸ್ಆರ್'ಟಿಸಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮತ್ತು ಇತರ ಬಸ್‌ಗಳಲ್ಲಿನ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಹಿಂಪಡೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂಡಿದೆ ಮಾತನಾಡಿದ ಅವರು, “ಸಾರ್ವಜನಿಕರು ಇನ್ನು ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿಲ್ಲ. ದ್ವಿಚಕ್ರ, ತ್ರಿಚಕ್ರ ಅಥವಾ ವಿಮಾನಗಳಲ್ಲಿ ಯಾವುದೇ ನಿರ್ಬಂಧಗಳನ್ನು ಅನುಸರಿಸಲಾಗುತ್ತಿಲ್ಲ. ಹೀಗಿರುವಾಗ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ನಿರ್ಬಂಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಆದರೆ, ಬಸ್‌ಗಳಲ್ಲಿ ಪ್ರಯಾಣಿಸುವಾಗ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕೆಂದು ಹೇಳಿದ್ದಾರೆ.
ರಾಜ್ಯದ ವಿವಿಧ ಮಾರ್ಗಗಳಲ್ಲಿ ಬಸ್ ಗಳು ಸಂಚಾರ ನಡೆಸುತ್ತಿವೆ. ಬೇಡಿಕೆಗಳಿಗೆ ಅನುಗುಣವಾಗಿ ಬಸ್ ಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ಯಪ್ರದೇಶದ ನಡುವೆ ಬಸ್ ಗಳನ್ನು ಬಿಡಲಾಗಿದೆ. ತೆಲಂಗಾಣ, ತಮಿಳುನಾಡು, ಗೋವಾ ಹಾಗೂ ಪಾಂಡಿಚೆರಿ ರಾಜ್ಯಗಳಿಗೂ ಪತ್ರ ಪರೆಯಲಾಗಿದ್ದು, ಅಂತರ್ ರಾಜ್ಯ ಬಸ್ ಗಳ ಸೇವೆ ಪ್ರಾರಂಭಿಸುವಂತೆ ತಿಳಿಸಿದೆ. ಆದರೆ, ಈ ವರೆಗೂ ಆ ರಾಜ್ಯಗಳಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ. ಈ ಕುರಿತು ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ. ಮಹಾರಾಷ್ಟ್ರ ರಾಜ್ಯಕ್ಕಿನ್ನೂ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರಿಗೆ ಇಲಾಖೆಗೆ ಪ್ರತೀನಿತ್ಯ ರೂ.2.5 ಕೋಟಿ ನಷ್ಟ ಎದುರಾಗುತ್ತಿದೆ. ಆದರೂ, ಸಿಬ್ಬಂದಿಗಳಿಗೆ ಸರ್ಕಾರದ ಅನುದಾನದಲ್ಲಿ ವೇತನವನ್ನು ನೀಡಲಾಗುತ್ತಿದೆ ಎಂದಿದ್ದಾರೆ.
ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ನಿರ್ಧಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದಾಗಿದೆ. ಅಧಿವೇಶನಕ್ಕೂ ಮುನ್ನ ಅಥವಾ ಅಧಿವೇಶನದ ಬಳಿಕವಾದರೂ ನಡೆಯಬಹುದು. ಈ ಬಗ್ಗೆ ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜೊತೆಗೆ ಸಭೆ ನಡೆಸಿ ಅಂತಿನ ನಿರ್ಧಾರ ಕೈಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


