ಸಂಜನಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಪ್ರಶಾಂತ್ ಸಂಬರಗಿ
ಸ್ಯಾಂಡಲ್ ವುಡ್ ಗೆ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸಿಸಿಬಿಯಿಂದ ಬಂಧಿತರಾಗಿ ಸಾಂತ್ವನ ಕೇಂದ್ರದಲ್ಲಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ಗೆ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ಸಿಸಿಬಿಯಿಂದ ಬಂಧಿತರಾಗಿ ಸಾಂತ್ವನ ಕೇಂದ್ರದಲ್ಲಿದ್ದಾರೆ.
ಮತ್ತಷ್ಟು ನಟ, ನಟಿಯರ ಹಾಗೂ ಗಣ್ಯಾತಿಗಣ್ಯರ ಮಕ್ಕಳು ಕೇಸ್ ನಲ್ಲಿ ಲಾಕ್ ಆಗುವ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಇದೇ ವೇಳೆ ನಟಿ ಸಂಜನಾ ಗಲ್ರಾನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಚಲನಚಿತ್ರ ವಿತರಕ, ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೇಳಿದ್ದಾರೆ.
'ನಾನು ಸಂಜನಾ ಹೆಸರನ್ನೇ ತೆಗೆದುಕೊಂಡಿರಲಿಲ್ಲ. ಆದರೆ, ಅವರೇ ಕುಂಬಳಕಾಯಿ ಕಳ್ಳ ಎನ್ನುವಂತೆ ಹಂದಿ, ನಾಯಿ ಅಂತೆಲ್ಲ ಮಾತನಾಡಿದ್ದಾರೆ. ಚಪ್ಪಲಿಯಲ್ಲಿ ಹೊಡಿತೀನಿ, ರೋಡಲ್ಲಿ ಹೊಡಿತೀನಿ ಅಂತೆಲ್ಲ ಹೇಳಿದ್ದಾರೆ. ನಾನು ಉತ್ತರ ಕರ್ನಾಟಕದ ನಿವಾಸಿ, ಬೆಳಗಾವಿಯವನು ನಾನು. ನನ್ನ ಬಂಧುಗಳು, ನನ್ನ ಸಂಬರಗಿ ಕುಟುಂಬ ದೊಡ್ಡದು. ಹಾಗಾಗಿ, ಸಂಜನಾ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.
ಪ್ರಶಾಂತ್ ಸಂಬರಗಿ ಅವರು ನೇರವಾಗಿ ಸಂಜನಾ ಅವರ ಹೆಸರು ಹೇಳದೇ ಪರೋಕ್ಷವಾಗಿ ನಟಿ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಆದರೆ, ಸಂಜನಾ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದರು. ಅಲ್ಲದೆ ಪ್ರಶಾಂತ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದರ ವಿರುದ್ಧ ಪ್ರಶಾಂತ್ ಕಾನೂನಿನ ಮೊರೆ ಹೋಗಲು ನಿರ್ಧಾರ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


