ರಾಜ್ಯ

ಬೆಳಗಾವಿ: ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಗೆ ಇಡಿ ಶಾಕ್, 31 ಕೋಟಿ ರು ಆಸ್ತಿ ಜಪ್ತಿ

ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದಿದೆ. 232 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣ.ಕ್ಕೆ ಸಂಬಂಧಿಸಿ ಈ ಬೆಳವಣಿಗೆ ನಡೆದಿದೆ.

ಬೆಳಗಾವಿ: ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಗೆ ಇಡಿ ಶಾಕ್, 31 ಕೋಟಿ ರು ಆಸ್ತಿ ಜಪ್ತಿ
Published On :

ಬೆಳಗಾವಿ: ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ  (ಇಡಿ)  ವಶಕ್ಕೆ ಪಡೆದಿದೆ.  232 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣ.ಕ್ಕೆ ಸಂಬಂಧಿಸಿ ಈ ಬೆಳವಣಿಗೆ ನಡೆದಿದೆ.

ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ  ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ 

ಸಂಗೊಳ್ಳಿ ರಾಯಣ್ಣ ಕೊ ಆಪರೇಟಿವ್ ಸೊಸೈಟಿಯಲ್ಲಿ ಠೇವಣಿಯಿಟ್ಟಿದ್ದ ಸಾವಿರಾರು ಜನರ 250 ಕೋಟಿ ರೂ.ಗೂ ಅಧಿಕ ಮೊತ್ತವನ್ನು ದುರ್ಬಳಕೆ ಮಾಡಿದ ಆರೋಪ ಇವರ ಮೇಲಿದೆ. ಇದಾಗಲೇ ಹಲವು ಪ್ರಕರಣದಲ್ಲಿ ಜೈಲುವಾಸ ಅನುಭವಿಸಿರುವ ಅಪ್ಪುಗೋಳ್ ಮೇಲೆ ಮತ್ತೆ ಇಡಿ ಕಣ್ಣು ಬಿದ್ದಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.