ಕಾರವಾರ: ಸಂತಾನಹರಣ ಚಿಕಿತ್ಸೆ ವೇಳೆ ಮಹಿಳೆ ಸಾವು, ತನಿಖೆಗೆ ಸುಧಾಕರ್ ಆದೇಶ
ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ

ಚಿಕ್ಕಬಳ್ಳಾಪುರ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತಾನಹರಣ ಶಸ್ತ್ರ ಚಿಕಿತ್ಸಾ ವೇಳೆ 30 ವರ್ಷದ ಮಹಿಳೆ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ. ಇದು ಸರ್ವೇ ಸಾಮಾನ್ಯ ಶಸ್ತ್ರಚಿಕಿತ್ಸೆ. ಯಾವ ಕಾರಣಕ್ಕೆ ಸಾವಾಗಿದೆ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕು. ಈಗಾಗಲೇ ಇಲಾಖೆ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಒಂದು ವೇಳೆಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದರೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಮರಣೋತ್ತರ ಪರೀಕ್ಷಾ ವರದಿ ಕೈಸೇರುವವರೆಗೂ ಯಾರ ಮೇಲೂ ಆಪಾದನೆ ಮಾಡಲಾಗದು. ಆದರೆ ಮಹಿಳೆ ಸಾವಿನ ಬಗ್ಗೆ ಕನಿಕರವಿದೆ. ಅವರ ಕುಟುಂಬಕ್ಕೆ ಆರ್ಥಿಕ ನೆರವು ಸಿಗುವ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ ಎಂದರು..
ಇಂಥ ಪ್ರಕರಣದಲ್ಲಿ ಅನಸ್ತೇಶಿಯ ಪ್ರಮಾಣ ಅಧಿಕವಾದಾಗ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು. ಇದರಲ್ಲಿ ಲೋಪವಾಗಿದೆಯೇ ಎಂಬುದು ತನಿಖೆಯಿಂದಷ್ಟೇ ದೃಢವಾಗಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಸರ್ಜನ್ ವಿರುದ್ಧ ಎಸ್‌ಪಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಕ್ಕೆ ಎಫ್‌ಐಆರ್ ದಾಖಲಿಸುವಂತಿಲ್ಲ. ವೈದ್ಯ ಸಮೂಹ ಇದರಿಂದ ಗಾಬರಿ ಆಗುವ ಅವಶ್ಯಕತೆ ಇಲ್ಲ. ಈ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


