ಶಾಲೆಗಳ ಪುನಾರಂಭ: ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ; ಸುರೇಶ್ ಕುಮಾರ್
ಶಾಲೆಗಳನ್ನು ಪುನಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಮೊದಲು ರಾಜ್ಯವು ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನಗಳಿಗಾಗಿ ಕಾಯುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: 9 ರಿಂದ 12ನೇ ತರಗತಿ ಮಕ್ಕಳಿಗೆ ಶಾಲೆಯನ್ನು ತೆರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಶಾಲೆಗಳನ್ನು ಪುನಾರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಮೊದಲು ರಾಜ್ಯವು ಕೇಂದ್ರ ಶಿಕ್ಷಣ ಸಚಿವಾಲಯದ ನಿರ್ದೇಶನಗಳಿಗಾಗಿ ಕಾಯುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ನಿಯಮಿತವಾಗಿ ವಿದ್ಯಾರ್ಥಿ-ಶಿಕ್ಷಕರ ಸಂವಾದಕ್ಕೆ ವ್ಯವಸ್ಥೆ ಮಾಡುತ್ತಿದೆ.
ಶಾಲಾ ಆವರಣವನ್ನು ಮಾತ್ರ ಬೋಧನೆಗೆ ಬಳಸಲಾಗುತ್ತಿಲ್ಲ, ಆದರೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬರುತ್ತದೆ.
ಕೇವಲ 9ರಿಂದ 12ನೇ ತರಗತಿ ಮಾತ್ರವಲ್ಲ ಎಲ್ಲಾ ತರಗತಿ ವಿದ್ಯಾರ್ಥಿಗಳು ವಿದ್ಯಾಗಮದ ಅಡಿಯಲ್ಲಿ ಬರುತ್ತವೆ. ಇದು ಇತರ ರಾಜ್ಯಗಳ ಗಮನವನ್ನು ಸೆಳೆದಿವೆ.
ಶಾಲೆಗಳ ಭಾಗಶಃ ಪುನರಾರಂಭಕ್ಕಾಗಿ ಕೇಂದ್ರವು ಎಸ್‌ಒಪಿ ಯೊಂದಿಗೆ ಬಂದಿದೆ. ಆದರೆ ಯಾವಾಗ ಇದು ಅನುಷ್ಠಾನಗೊಳ್ಳಲಿದೆ ಎಂಬ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲದ ನಿಯಮಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಬೇರೆ ತರಗತಿಗಳಿಗೆ ಕ್ಲಾಸ್ ಆರಂಭಿಸಲು ಕರ್ನಾಟಕ ಮುಂದಾಳತ್ವ ವಹಿಸಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯ ಸರ್ಕಾರ ಯಾವಾಗಲೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ನಡೆಯುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


