ಫಿಲ್ಮ್ ಸಿಟಿ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭ: ಸಿಎಂ ಯಡಿಯೂರಪ್ಪ
ಬೆಂಗಳೂರಿನಲ್ಲಿ ನಿರ್ಮಾಣ ಮಾಡುತ್ತೇವೆಂದು ಘೋಷಣೆ ಮಾಡಲಾಗಿದ್ದ ಫಿಲ್ಮ್ ಸಿಟಿ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಮಾಡುತ್ತೇವೆಂದು ಘೋಷಣೆ ಮಾಡಲಾಗಿದ್ದ ಫಿಲ್ಮ್ ಸಿಟಿ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಚಿತ್ರರಂಗ ಸಂಕಷ್ಟದಲ್ಲಿದೆ. ಚಿತ್ರರಂಗಕ್ಕೆ ಸರ್ಕಾರ ಸಾಧ್ಯವಾದ ಎಲ್ಲಾ ಸಹಾಯಗಳನ್ನು ಮಾಡಲಿದೆ. ಪ್ರಮುಖವಾಗಿ ಫಿಲ್ಮ್ ಸಿಟಿ ನಿರ್ಮಾಣ ಕುರಿತ ಕಾರ್ಯ ಶೀಘ್ರದಲ್ಲಿಯೇ ಆರಂಭಗೊಳ್ಳಲಿದೆ. ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಭೂಮಿ ಹುಡುಕುವ ಕಾರ್ಯ ಮುಂದುವರೆಯುತ್ತಿದೆ. ಶೀಘ್ರದಲ್ಲೇ ಭೂಮಿ ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತದೆ. ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣವಾಗಲಿದ್ದು, ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಯೋಜನೆಗೆ ರೂ.500 ಕೋಟಿ ಮೀಸಲಿಡಲಾಗಿದೆ. ಶೀಘ್ರದಲ್ಲೇ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ.
ಚಿತರಂಗ ಪ್ರಮುಖರು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಆ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


