ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್
ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.
ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು. ನೆಗಡಿ, ಮೈ-ಕೈ ನೋವಿದ್ದ ಕಾರಣ ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಮನೋಜ್ ಕುಮಾರ್ ಹಾಗೂ ಅವರ ಪತ್ನಿ, ಮಗನಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಹೋಂ ಐಸೋಲೇಷನ್ನಲ್ಲೇ ಇದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು 9 ದಿನಕ್ಕೆ ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಈ ಕುರಿತು ಮನೋಜ್ ಕುಮಾರ್ ಮಾಧ್ಯಮಗಳೊಂದಿಗೆಪ್ರತಿಕ್ರಿಯಿಸಿದ್ದು, ಹೋಂ ಐಸೋಲೇಷನ್ನಲ್ಲಿದ್ದು ಗುಣಮುಖರಾಗಿದ್ದೇವೆ, ರೋಗ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು, ಒಂದು ವೇಳೆ ನಿರ್ಲಕ್ಷಿಸಿದರೆ ವೈದ್ಯರು ಅಸಹಾಯಕರಾಗುತ್ತಾರೆ. ಹೋಂ ಐಸೋಲೇಷನ್ನಲ್ಲಿದ್ದುಕೊಂಡೆ ಗುಣಮುಖರಾಗಬಹುದು, ಒಂದು ವೇಳೆ ಸೋಂಕು ದೃಢವಾದರೂ ಧೈರ್ಯಗೆಡಬಾರದು ಎಂದಿದ್ದಾರೆ.ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.
ವರದಿ ಗುಳಿಪುರ ನಂದೀಶ ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


