ರಾಜ್ಯ

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್‌ ಗುಪ್ತ ಅಧಿಕಾರ ಸ್ವೀಕಾರ; ಸಕಾರಾತ್ಮಕ ಆಡಳಿತದ ಭರವಸೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೂತನ ಆಡಳಿತಗಾರರಾಗಿ ಐಎಎಸ್‌ ಅಧಿಕಾರಿ ಗೌರವ್ ಗುಪ್ತ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್‌ ಗುಪ್ತ ಅಧಿಕಾರ ಸ್ವೀಕಾರ; ಸಕಾರಾತ್ಮಕ ಆಡಳಿತದ ಭರವಸೆ
ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್‌ ಗುಪ್ತ ಅಧಿಕಾರ ಸ್ವೀಕಾರ
Published On :

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ನೂತನ ಆಡಳಿತಗಾರರಾಗಿ ಐಎಎಸ್‌ ಅಧಿಕಾರಿ ಗೌರವ್ ಗುಪ್ತ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪಾಲಿಕೆ ಕೇಂದ್ರ ಕಛೇರಿಯಲ್ಲಿ ಬೆಳಗ್ಗೆ 9.45ಕ್ಕೆ ಅಧಿಕಾರ ಸ್ವೀಕರಿಸಿದ ಗೌರವ್‌ ಗುಪ್ತಾ, ಆಯುಕ್ತರು, ಅಧಿಕಾರಿಗಳು, ಸರ್ಕಾರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಗರದ ಅಭಿವೃದ್ಧಿಗೆ ಸಕಲ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಬಜೆಟ್‌, ಕೋವಿಡ್‌ ಸಮಸ್ಯೆ ಮತ್ತು ಮಳೆಗಾಲದ ಸಿದ್ಧತೆ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ, ಅಗತ್ಯ ಸುಧಾರಣೆ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.