ಡ್ರಗ್ಸ್ ದಂಧೆ: ಕಾನೂನು ಮತ್ತಷ್ಟು ಬಿಗಿಗೊಳಿಸಲು ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣ ದೃಷ್ಟಿಯಿಂದ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣ ದೃಷ್ಟಿಯಿಂದ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದವರನ್ನು ವಿಚಾರಣೆ ನಡೆಸಲಾಗುತ್ತದೆ. ಡ್ರಗ್ಸ್ ಜಾಲದಲ್ಲಿ ಯಾರೇ ಭಾಗಿಯಾಗಿರಲಿ, ಎಷ್ಟೇ ಪ್ರಭಾವಿಗಳಾಗಲಿ ಅಥವಾ ದೊಡ್ಡವರಾಗಿರಲಿ ಕಾನೂನಿನ ಪ್ರಕಾರ ತನಿಖೆ ನಡೆಸಿ ವಿಚಾರಣೆ ನಡೆಸಲಾಗುತ್ತದೆ. ಯಾರ ಒತ್ತಡಕ್ಕೂ ಮಣಿಯದೇ ತನಿಖೆ ಕೈಗೊಳ್ಳಲಾಗಿದೆ. ಎಂದರು.
ಪೊಲೀಸರ ಎಲ್ಲಾ ಕಾರ್ಯಾಚರಣೆ ಮತ್ತು ವಿಚಾರಣೆ ನ್ಯಾಯಾಲಯದ ಪರಿಶೀಲನೆಗೊಳಪಡಿಸಲಿದೆ. ಹೀಗಾಗಿ ಕಾನೂನಿನ ಅನ್ವಯವೇ ನಾವು ವಿಚಾರಣೆ ಮಾಡುತ್ತಿದ್ದೇವೆ. ಸಿಸಿಬಿ ಅಧಿಕಾರಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯ ಯಾವುದೇ ಒತ್ತಡಕ್ಕೂ ಮಣಿಯದೆ ಮುಕ್ತವಾಗಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ.
ಮಾದಕ ಜಾಲ ನಿಯಂತ್ರಣಕ್ಕಾಗಿ ಕಠಿಣ ಕಾನೂನು ಜಾರಿ ಮಾಡಬೇಕು ಎಂಬುದರ ಬಗ್ಗೆ ತಜ್ಞರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


