ಮೂವರು ಅರ್ಚಕರ ಹತ್ಯೆ: ಸಂತ್ರಸ್ತ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ಪ್ರಕಟಿಸಿದ ಮುಖ್ಯಮಂತ್ರಿ
ಮಂಡ್ಯದಲ್ಲಿನ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರು ಹತ್ಯೆಯಾಗಿದ್ದು ಸಂತ್ರಸ್ಥ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಬೆಂಗಳೂರು: ಮಂಡ್ಯದಲ್ಲಿನ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರು ಹತ್ಯೆಯಾಗಿದ್ದು ಸಂತ್ರಸ್ಥ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿಯನ್ನು ಕಳ್ಳತನ ಮಾಡಿರುವ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಗಣೇಶ್ (35), ಪ್ರಕಾಶ್ (36) ಮತ್ತು ಆನಂದ್ (33) ಅವರನ್ನು ಇಂದು ಬೆಳಗ್ಗಿನ ಜಾವ ಹತ್ಯೆಗೈದು ಹುಂಡಿಯ ಹಣವನ್ನು ಕಳ್ಳತನ ಮಾಡಲಾಗಿದೆ. ಅವರು ದೇವಾಲಯದ ಅರ್ಚಕರು ಮತ್ತು ಕಾವಲುಗಾರರಾಗಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


