ಕಲಬುರಗಿ : ಗಾಂಜಾ ಪ್ರಕರಣದಲ್ಲಿ ಕರ್ತವ್ಯಲೋಪ, ಪಿಎಸ್ಐ ಸೇರಿ ನಾಲ್ವರು ಪೋಲೀಸ್ ಅಧಿಕಾರಿಗಳು ಅಮಾನತು
ಕಲಬುರಗಿಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾರ್ಮ್ ಹೌಸ್ನಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಾಳಗಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರು ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆ ನಾಲ್ವರನ್ನು ಅಮಾನತುಗೊಳಿಸಿ ಎಸ್ಪಿ ಸಿಮಿ ಮರಿಯಮ್ ಜಾರ್ಜ್ ಆದೇಶಿಸಿದ್ದಾರೆ.

ಕಲಬುರಗಿ: ಕಲಬುರಗಿಯ ಕಾಳಗಿ ಬಳಿಯ ಲಕ್ಷ್ಮಣನಾಯಕ ತಾಂಡಾದ ಕುರಿ ಫಾರ್ಮ್ ಹೌಸ್ನಲ್ಲಿ ಪತ್ತೆಯಾದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ಕಾಳಗಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರು ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಹಿನ್ನೆಲೆ ನಾಲ್ವರನ್ನು ಅಮಾನತುಗೊಳಿಸಿ ಎಸ್ಪಿ ಸಿಮಿ ಮರಿಯಮ್ ಜಾರ್ಜ್ ಆದೇಶಿಸಿದ್ದಾರೆ.
ಅಮಾನತುಗೊಂಡವರನ್ನು ಪಿಎಸ್ಐ ಬಸವರಾಜ ಚಿತಕೋಟೆ, ಎಎಸ್ಐ ನೀಲಕಂಠಪ್ಪ ಹೆಬ್ಬಾಳ, ಮತ್ತು ಬೀಟ್ ಪೊಲೀಸ್ ಕಾನ್ಸ್ಟೇಬಲ್ಗಳಾದ ಶರಣಪ್ಪ ಹಾಗೂ ಅನಿಲ್ ಭಂಡಾರಿ ಎಂದು ಗುರುತಿಸಲಾಗಿದೆ.
ಕಾಳಗಿ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣನಾಯಕ್ ತಾಂಡಾದ ಕುರಿ ಫಾರ್ಮ್ ಹೌಸ್ನಲ್ಲಿ 6 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದ್ದ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


