ರಾಜ್ಯ

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್

ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್
ಶಾಸಕ ಜಮೀರ್ ಅಹಮದ್ ಹಾಗೂ ಪ್ರಶಾಂತ್ ಸಂಬರಗಿ
Published On :

ಬೆಂಗಳೂರು:  ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಸಂಜನಾ ಜೊತೆಯಲ್ಲೇ ಶ್ರೀಲಂಕಾಗೆ ಹೋಗಿದ್ದಾರೆ ಎಂದು ಹೇಳಿರಲಿಲ್ಲ ಎಂದರು.

ಆದರೆ 2019 ರ ಜೂನ್ 8,9,10 ರಂದು ಜಮೀರ್ ಅಹ್ಮದ್ ಖಾನ್ ಎಲ್ಲಿದ್ದರು? ಅವರು ಶ್ರೀಲಂಕಾದಲ್ಲಿ ಇದ್ದರೋ ಇಲ್ಲವೋ ಎನ್ನುವುದನ್ನು ಮೊದಲು ಅವರಾಗಿಯೇ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು. 

ಇನ್ನು ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.