ಮುಂದಿನ ಶುಕ್ರವಾರ ಮತ್ತೆ ವಿಚಾರಣೆ- ಪ್ರಶಾಂತ್ ಸಂಬರಗಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ನಡೆಸಿದ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿಚಾರಣೆ ಮುಕ್ತಾಯವಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ನಡೆಸಿದ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿಚಾರಣೆ ಮುಕ್ತಾಯವಾಗಿದೆ.
ವಿಚಾರಣೆ ಮುಗಿಸಿ ಸಿಸಿಬಿ ಕಚೇರಿಯಿಂದ ಹೊರಬಂದ ಸಂಬರಗಿ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ನನ್ನ ಬಳಿಯಿದ್ದ ಸಾಕ್ಷ್ಯಗಳನ್ನು ನೀಡಿದ್ದೇನೆ. ಶೇಕ್ ಫಾಜಿಲ್ ಹಾಗೂ ಶಾಸಕ ಜಮೀರ್ ಅಹಮದ್ ನಂಟಿಗೆ ಸಂಬಂಧಿಸಿ ವಿಚಾರಣೆ ಮಾಡುವಂತೆ ಸಿಸಿಬಿಗೆ ಮನವಿ ಮಾಡಿದ್ದೇನೆ ಎಂದರು.
ಕೊಲಂಬೋದ ಕ್ಯಾಸಿನೋಗೆ ಹೋಗಿರುವುದಾಗಿ ಸ್ವತಃ ಜಮೀರ್ ಅಹಮದ್ ಒಪ್ಪಿಕೊಂಡಿರುವ ಕಾರಣ ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಪ್ರಶಾಂತ್ ಸಂಬರಗಿ ತಿಳಿಸಿದರು.
ನಟಿ ಸಂಜನಾ ಅವರ ಬಗ್ಗೆ ಯಾವ ದಾಖಲೆ ನೀಡಿಲ್ಲ, ಐಟಿ, ಇಡಿ ಕುರಿತು ಏನನ್ನೂ ಮಾತನಾಡಿಲ್ಲ. ಜೊತೆಗೆ ಯಾವುದೇ ನಟ, ನಟಿಯರ ಬಗ್ಗೆ ನಾನು ದಾಖಲೆ ನೀಡಿಲ್ಲ. ನಾನು ಯಾವುದೇ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿಲ್ಲ. ರಾಜಕೀಯ ಪ್ರೇರಿತವಾಗಿ ಈ ಅಭಿಯಾನ ನಡೆಸುತ್ತಿಲ್ಲ ಎಂದು ಸಹ ಅವರು ಹೇಳಿದರು.
ತಮ್ಮ ವಿರುದ್ಧದ ಎಫ್ ಐಆರ್ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುತ್ತೇನೆ.ನಾನು ಗಾಳಿಯಲ್ಲಿ ಗುಂಡು ಹೊಡೆಯುವುದಿಲ್ಲ, ಸದ್ಯ ಯಾವುದೇ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ, ಜಮೀರ್ ಮತ್ತು ಪಾಜಿಲ್ ಮದ್ಯದ ವ್ಯವಹಾರದ ಬಗ್ಗೆ ಹೆಚ್ಚಿನ ಚರ್ಚೆ ಆಗಬೇಕು ಎಂದು ಸಂಬರಗಿ ಹೇಳಿದರು.
ಇದಕ್ಕೂ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


