ಚಾಮರಾಜನಗರದ ಹಂಗಳ ಗ್ರಾಮದಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ, ಪ್ರಕರಣ ದಾಖಲು
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ವೈನ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಕುಟುಂಬಸ್ಥರು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ವೈನ್ ಸ್ಟೋರ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಕುಟುಂಬಸ್ಥರು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಮನೆಗೆ ತೆರಳದೆ ಗ್ರಾಮದ ಮುಖ್ಯ ರಸ್ತೆ ಪಕ್ಕ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದಾಗ ಯಾರೋ ಕೊಲೆಗೈದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಸವಣ್ಣ(40) ಮೃತ ದುರ್ದೈವಿಯಾಗಿದ್ದು, ಈತ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಮನೆಗೆ ತೆರಳದೆ ಗ್ರಾಮದ ಮುಖ್ಯ ರಸ್ತೆ ಪಕ್ಕ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಯಾರೋ ಸಾಯಿಸಿದ್ದಾರೆ ಎಂದು ಸಂಬಂಧಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಮೃತ ಬಸವಣ್ಣ ಮೃತನ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಹಣೆಯಲ್ಲಿ ಹೊಡೆದ ರೀತಿ ಗಾಯದ ಗುರುತುಗಳಿವೆ.
ಶನಿವಾರ ಬೆಳಗಿನ ಜಾವ ಗ್ರಾಮಸ್ಥರು ಮೃತದೇಹವನ್ನು ಕಂಡು ಕುಟುಂಬಸ್ಥರು ಮತ್ತು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮೃತ ಬಸವಣ್ಣನಿಗೆ ಇಬ್ಬರು ಮಕ್ಕಳಿದ್ದು, ಪತ್ನಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಜೊತೆಗೆ ಇದು ಯಾರೋ ಕಿಡಿಗೇಡಿಗಳು ಹೊಡೆದು ಸಾಯಿಸಿರುವ ಘಟನೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


