ಸೆ.14 ರಿಂದ ದಾವಣಗೆರೆ ವಿವಿಯ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ: ಅ.20ಕ್ಕೆ ಫಲಿತಾಂಶ
ಕೋವಿಡ್-19 ಪ್ರಕರಣಗಳ ಏರಿಕೆಯ ಪರಿಣಾಮ ಹೆಚ್ಚುತ್ತಿರುವ ಅಸ್ಥಿರತೆಯ ನಡುವೆಯೇ ದಾವಣಗೆರೆ ವಿಶ್ವವಿದ್ಯಾನಿಲಯ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.

ಚಿತ್ರದುರ್ಗ/ದಾವಣಗೆರೆ: ಕೋವಿಡ್-19 ಪ್ರಕರಣಗಳ ಏರಿಕೆಯ ಪರಿಣಾಮ ಹೆಚ್ಚುತ್ತಿರುವ ಅಸ್ಥಿರತೆಯ ನಡುವೆಯೇ ದಾವಣಗೆರೆ ವಿಶ್ವವಿದ್ಯಾನಿಲಯ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ.
ಸೆ.14 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, ಅಕ್ಟೋಬರ್ 10 ಕ್ಕೆ ಎಲ್ಲಾ ಪರೀಕ್ಷೆಗಳೂ ಮುಕ್ತಾಯಗೊಂಡು ಅ.20 ರಂದು ಫಲಿತಾಂಶವೂ ಪ್ರಕಟಗೊಳ್ಳಲಿದೆ.
ಕೋವಿಡ್-19 ಪರಿಸ್ಥಿತಿಯಲ್ಲಿ ಉಂಟಾಗುವ ಆರೋಗ್ಯದ ಅಪಾಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಶ್ವವಿದ್ಯಾನಿಲಯ ಪರೀಕ್ಷೆಗೆ ತಯಾರಿ ನಡೆಸಿದೆ. ಶಿವಗಂಗೋತ್ರಿ ಹಾಗೂ ಗುಡ್ಡದ ರಂಗವ್ವನಹಳ್ಳಿಯಲ್ಲಿರುವ ಕ್ಯಾಂಪಸ್ ನ್ನು, ಘಟಕ ಮತ್ತು ಅಂಗಸಂಸ್ಥೆ ಕಾಲೇಜುಗಳನ್ನು ಪರೀಕ್ಷೆ ನಡೆಸುವುದಕ್ಕಾಗಿ ಸಿದ್ಧತೆ ಮಾಡಲಾಗಿದೆ.
ಕೋವಿಡ್-19 ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ಅನುಕೂಲವಾಗಲೆಂದು ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲಾಗಿದೆ. ರೋಗಲಕ್ಷಣ ರಹಿತರಾದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇನ್ನು ಇನ್ವಿಜಿಲೇಟರ್ ಗಳು ಪರೀಕ್ಷೆ ಮುಕ್ತಾಯಗೊಳ್ಳುವವರೆಗೂ ಪಿಪಿಇ ಕಿಟ್ ಗಳನ್ನು ಧರಿಸಿರುತ್ತಾರೆ ಎಂದು ವಿವಿಯ ರಿಜಿಸ್ಟಾರ್ ಪ್ರೊ. ಬಸವರಾಜ ಬಣಕಾರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿಯಿಂದ ಒಟ್ಟಾರೆ 47786 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


