ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ: ಚಿನ್ನಾಭರಣ ವ್ಯಾಪಾರಿ ಸಿಸಿಬಿ ಬಲೆಗೆ
ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದ್ದು, ನಗರದ ಚಿನ್ನಾಭರಣ ವ್ಯಾಪಾರಿಯೊಬ್ಬರನ್ನು ಶನಿವಾರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದ್ದು, ನಗರದ ಚಿನ್ನಾಭರಣ ವ್ಯಾಪಾರಿಯೊಬ್ಬರನ್ನು ಶನಿವಾರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ವೈಯಾಲಿಕಾವಲ್ ನಿವಾಸಿ ವೈಭವ್ ಜೈನ್ ಬಂಧಿತನಾಗಿದ್ದು, ಚಲನಚಿತ್ರ ನಟಿ ರಾಗಿಣಿ ದ್ವಿವೇದಿಯ ಸ್ನೇಹಿತನೂ ಆಗಿರುವ ಸಾರಿಗೆ ಇಲಾಖೆ ಉದ್ಯೋಗಿ ರವಿಶಂಕರ್ ಜೊತೆ ವೈಭವ್ ಸ್ನೇಹ ಹೊಂದಿದ್ದ. ಪೇಜ್ ತ್ರಿ ಪಾರ್ಟಿಗಳ ಆಯೋಜನೆ, ಡ್ರಗ್ಸ್ ಸೇವನೆ ಮತ್ತು ಮಾರಾಟದ ಆರೋಪದ ಮೇರೆಗೆ ಬಂಧಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ವೈಯಾಲಿಕಾವಲ್'ನ ವೈಭವ್, ಮಲ್ಲೇಶ್ವರದಲ್ಲಿ ಚಿನ್ನಾಭರಣ ಮಾರಾಟ ಮಳಿಗೆ ನಡೆಸುತ್ತಿದ್ದ. ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ವೈಭವ್ ದಂಪತಿ ದೂರವಾಗಿದ್ದರು. ಕೌಟುಂಬಿಕ ಕಲಹ ಸಂಬಂಧ ಆತನ ಮೇಲೆ ವೈಯಾಲಿಕಾವರ್ ಠಾಣೆಯಲ್ಲಿ ವೈಭವ್ ಪತ್ನಿ ದೂರು ಕೂಡ ದಾಖಲಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
4-5 ವರ್ಷಗಳಿಂದ ರಾಗಿಣಿ ಸ್ನೇಹಿತ ರವಿಶಂಕರ್ ಜೊತೆ ವೈಭವ್ ಸ್ನೇಹವಿತ್ತು. ಇದೇ ಗೆಳೆತನದಲ್ಲಿ ಪಬ್, ಕ್ಲಬ್, ರೆಸಾರ್ಟ್ ಹಾಗೂ ಹೋಟೆಲ್ ಗಳಲ್ಲಿ ನಡೆದಿದ್ದ ಹಲವು ಪಾರ್ಟಿಗಳಿಗೆ ರವಿಶಂಕರ್'ನೊಂದಿಗೆ ವೈಭವ್ ಪಾಲ್ಗೊಂಡಿದ್ದ. ಅಲ್ಲದೆ, ಕೆಲ ಪಾರ್ಟಿಗಲನ್ನು ಕೂಡ ವೈಭವ್ ಆಯೋಜಿಸಿದ್ದ ಎನ್ನಲಾಗುತ್ತಿದೆ.
ಕೆಲ ದಿನಗಳ ಹಿಂದೆ ರವಿಶಂಕರ್ ಮಾಹಿತಿ ಮೇರೆಗೆ ವೈಭವ್ನನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ, ತನಗೆ ಕೊರೋನಾ ಪಾಸಿಟಿವ್ ಇದೆ ಎಂದು ಅಧಿಕಾರಿಗಳಿಗೆ ಸುಳ್ಳು ಹೇಳಿ ಆರೋಪಿ ತಪ್ಪಿಸಿಕೊಂಡಿದ್ದ. ಬಳಿಕ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಹಿತಿ ಪಡೆದು ಬಂಧಿಸಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


