ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಅನೀವಾರ್ಯ- ಸಿದ್ದರಾಮಯ್ಯ
ಒಂದು ಕಡೆ ರೈತರ ಅಭಿವೃದ್ಧಿ ಬಗ್ಗೆ ಭಾಷಣ ಬಿಗಿಯುವುದು, ಮತ್ತೊಂದು ಕಡೆ ರೈತ ವಿರೋಧಿ ಕಾಯಿದೆಯನ್ನು ಜಾರಿ ಮಾಡುವುದು ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ

ಬೆಂಗಳೂರು: ಒಂದು ಕಡೆ ರೈತರ ಅಭಿವೃದ್ಧಿ ಬಗ್ಗೆ ಭಾಷಣ ಬಿಗಿಯುವುದು, ಮತ್ತೊಂದು ಕಡೆ ರೈತ ವಿರೋಧಿ ಕಾಯಿದೆಯನ್ನು ಜಾರಿ ಮಾಡುವುದು ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಂಗಳೂರಿನ ಗಾಂಧಿಭವನದಲ್ಲಿಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಬರೆದಿರುವ "ರೈತರ ಭದ್ರತೆ-ದೇಶದ ಭದ್ರತೆ" ಪುಸ್ತಕ ಲೋಕಾರ್ಪಣೆ ಮಾಡಿ ಬಳಿಕ ಸಿದ್ದರಾಮಯ್ಯ ಮಾತನಾಡಿದರು.
ರೈತರನ್ನು ಶೋಷಿಸುವ ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆ ತರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಇರುವ ಶೋಷಣೆಯನ್ನು ತಪ್ಪಿಸಬಹುದಿತ್ತು. ಆದರೆ ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿ ಮಾಡಿದೆ. ಬಲವಂತವಾಗಿ ಬಾರ ಹೊರಿಸಿದರೆ ಹೊರಬೇಕಷ್ಟೆ. ಈ ಕಾಯ್ದೆಯಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಕೇಂದ್ರದ ಮುಂದೆ ರಾಜ್ಯ ಸರ್ಕಾರ ಕೋಲೆ ಬಸವನಂತಾಗಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳ ವಿರುದ್ಧ ಸದನದಲ್ಲಿ ಸುಧೀರ್ಘ ಚರ್ಚೆ ನಡೆಸಿ ಅವುಗಳ ಸಾಧಕ- ಬಾಧಕಗಳನ್ನು ರಾಜ್ಯದ ಜನರ ಮುಂದೆ ಇಡಬೇಕು ಎಂಬುದು ನಮ್ಮ ಆಶಯ. ಆದರೆ, ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ವಿಚಾರಗಳ ಚರ್ಚೆಗೆ ಅಗತ್ಯ ಸಮಯ ಸಿಗುವುದೇ ಅನುಮಾನವೆಂತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


