ಬನ್ನಿಮಂಟಪದವರೆಗೆ ಜಂಬೂ ಸವಾರಿ ಬರದಿದ್ದರೆ ಜಟಕಾ ಬಂಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ- ವಾಟಾಳ್ ನಾಗರಾಜ್
ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಮೈಸೂರು: ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಮೈಸೂರಿನ ಜಯಚಾಮರಾಜ ವೃತ್ತದಲ್ಲಿ ರಾಜ್ಯ ಸರ್ಕಾರದ ಸರಳ ದಸರಾ ಆಚರಣೆ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ಅವರು, ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಸೀಮಿತವಾಗಿ ದಸರಾ ಆಚರಣೆ ಸಲ್ಲದು. ಕೊರೋನಾ ಸೋಂಕು ನಿಯಂತ್ರಣ ಕ್ರಮಗಳ ನಡುವೆಯು ದಸರಾ ವೈಭವಕ್ಕೆ ಯಾವುದೇ ತೊಂದರೆ ಎದುರಾಗಬಾರದು ಎಂದರು.
ನಾಡಹಬ್ಬ ದಸರಾವನ್ನು ಅದ್ದೂರಿಯಾಗಿಯೇ ಮಾಡಬಹುದು. ಸರಳ ದಸರಾ ಮಾಡಲು ೧೫ ಕೋಟಿ ರೂ ಏಕೆ ಬೇಕು.ಸ್ಥಳೀಯ ಕಲಾವಿದವರ ಮೂಲಕ ನಾಡಿನ ಕಲೆ, ಸಂಸ್ಕೃತಿ ಎತ್ತಿ ಹಿಡಿಯುವ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಸರ್ಕಾರ ದಸರಾ ವೈಭವಕ್ಕೆ ಯಾವುದೇ ಕೊರತೆ ಮಾಡಬಾರದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


