ಕಾಂಗ್ರೆಸ್ -ಜೆಡಿಎಸ್ ಸರ್ಕಾರದಲ್ಲಿ ಡ್ರಗ್ಸ್ ದಂಧೆಗೆ ರಕ್ಷಣೆ- ಶೆಟ್ಟರ್ ಕಿಡಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ ಆಡಳಿತಗಾರರ ರಕ್ಷಣೆಯೇ ಪ್ರಮುಖ ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.

ಧಾರವಾಡ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ ಆಡಳಿತಗಾರರ ರಕ್ಷಣೆಯೇ ಪ್ರಮುಖ ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಭುಗಿಲೆದ್ದಿರುವ ಡ್ರಗ್ ಪ್ರಕರಣದಲ್ಲಿ ತೊಡಗಿರುವವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು, ಇಂದು ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ "ಸಹಿ ಸಂಗ್ರಹ ಅಭಿಯಾನ"ದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಶಾಸಕ ಜಮೀರ್ ಅಹಮದ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕ್ಯಾಸಿನೋಗೆ ಹೋಗಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


