ಕೊರೋನಾ ಗೆದ್ದ ತುಮಕೂರಿನ ಮಕ್ಕಳು!
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಅಂತೆಯೇ ತುಮಕೂರಿನಲ್ಲೂ ಕೂಡ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡಬರುತ್ತಿದೆ. ಆದರೆ ತುಮಕೂರಿನ ಒಟ್ಟಾರೆ ಸೋಂಕಿತರ ಪೈಕಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಕ್ಕಳು ಈ ವೈರಸ್‌ಗೆ ಬಲಿಯಾಗಿಲ್ಲ.

ತುಮಕೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಅಂತೆಯೇ ತುಮಕೂರಿನಲ್ಲೂ ಕೂಡ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡಬರುತ್ತಿದೆ. ಆದರೆ ತುಮಕೂರಿನ ಒಟ್ಟಾರೆ ಸೋಂಕಿತರ ಪೈಕಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಕ್ಕಳು ಈ ವೈರಸ್‌ಗೆ ಬಲಿಯಾಗಿಲ್ಲ.
ಹೌದು... ತುಮಕೂರಿನಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಐಸಿಯುಗೆ ಸೇರುತ್ತಿರುವ ರೋಗಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇನ್ನು ಜಿಲ್ಲೆಯಲ್ಲಿ ಈವರೆಗೂ ಜಿಲ್ಲೆಯಲ್ಲಿ ಸೋಂಕಿಗೆ 200 ಮಂದಿ ಬಲಿಯಾಗಿದ್ದು, ಆದರೆ ಅಚ್ಚರಿ ಎಂಬಂತೆ ಜಿಲ್ಲೆಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಕ್ಕಳು ಈ ವೈರಸ್‌ಗೆ ಬಲಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ನ್ಯುಮೋನಿಯಾ ಮತ್ತು ಸಂಬಂಧಿತ ತೊಂದರೆಗಳನ್ನು ಹೊಂದಿದ್ದ 24 ವರ್ಷದ ಮಹಿಳೆಯ ಸಾವನ್ನು ಹೊರತುಪಡಿಸಿದರೆ ಈ ವರೆಗೂ ಕಡಿಮೆ ವಯಸ್ಸಿನ ಯುವಕರು ಸೋಂಕಿಗೆ ಬಲಿಯಾಗಿಲ್ಲ. ಈ ವರೆಗೂ ಜಿಲ್ಲೆಯಲ್ಲಿ 9,215 ಸೋಂಕು ಪ್ರಕರಣಗಳು ದಾಖಲಾಗಿದ್ದು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ 160 ಮಕ್ಕಳು ಸೋಂಕಿಗೆ ತುತ್ತಾಗಿದ್ದರು. ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಡಿಎಚ್‌ಒ ಡಾ ಎಂ ಬಿ ನಾಗೇಂದ್ರಪ್ಪ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


