ಸ್ಯಾಂಡಲ್ ವುಡ್ ಡ್ರಗ್ ಕೇಸ್: ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ದಾಳಿ
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಡ್ರಗ್ ಪ್ರಕರಣದ ಆರನೇ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ಮನೆಯ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಡ್ರಗ್ ಪ್ರಕರಣದ ಆರನೇ ಆರೋಪಿಯಾಗಿರುವ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಮಗ ಆದಿತ್ಯ ಆಳ್ವ ಮನೆಯ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸರ್ಚ್ ವಾರೆಂಟ್ ಪಡೆದು ಹೆಬ್ಬಾಳದ ಬಳಿ ಇರುವ ಆದಿತ್ಯ ಆಳ್ವ ಅವರ 'ಹೌಸ್ ಆಫ್ ಲೈಫ್' ಮನೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ದಾಖಲೆಗಳಿಗೆ ಹುಡುಕಾಟ ನಡೆಸಿದ್ದಾರೆ.
ರಾಗಿಣಿಯ ಬಂಧನವಾದ ಕೂಡಲೆ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಗಾಗಿ ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಆದರೂ ಆತ ಪತ್ತೆಯಾಗಿರಲಿಲ್ಲ. ಇಂದು ಆತನ ಮನೆ ಮೇಲೆ ಇನ್ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಹೆಬ್ಬಾಳ ಸಮೀಪದ ಆದಿತ್ಯ ಆಳ್ವ ಅವರ ಮನೆ ಸುಮಾರು 4 ಎಕರೆ ವಿಸ್ತೀರ್ಣದಲ್ಲಿದೆ. ಮನೆಯ ಆವರಣದಲ್ಲಿಯೇ ರೆಸಾರ್ಟ್ ಸಹ ಇದೆ. ಸದ್ಯ ಇನ್ಸ್ಪೆಕ್ಟರ್ ಪುನೀತ್ ತಂಡದಿಂದ ಮನೆಯ ಶೋಧ ನಡೆಸಲಾಗುತ್ತಿದೆ.
ಸದ್ಯಕ್ಕೆ ಮನೆಯಲ್ಲಿ ಕೆಲಸಗಾರರು ಬಿಟ್ಟರೆ ಉಳಿದವರು ಯಾರೂ ಇಲ್ಲ. ಸಾಕಷ್ಟು ಪಾರ್ಟಿಗಳು ಇಲ್ಲಿಯೇ ನಡೆದಿರೋ ಸಾಧ್ಯತೆಯಿದೆ. ಪೊಲೀಸರಿಗೆ ಸಿಕ್ಕಿರೋ ಪಾರ್ಟಿಗಳ ಪೋಟೊಗಳು ಸಹ ಇಲ್ಲಿಯದ್ದೇ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


