ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ
ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು: ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಟರ್ಕಿಶ್ ಯೂತ್ ಫೆಡರೇಶನ್ ಜೊತೆಗೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಗಳು ಕೈಜೋಡಿಸಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಘಟನೆಗಳ ಕುರಿತು ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಈ ಪ್ರಶ್ನೆಗೆ ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಪರಿಸ್ಥಿತಿ ಎದುರಾದರೂ ಅಗತ್ಯ ಬಿದ್ದಾಗ ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟು ಮಾಡುವ, ಕಾನೂನುಗಳ ವಿರುದ್ಧ ನಡೆಯುವ ಸಂಘಟನೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


