ರಾಜ್ಯ

ಭಾರತ ಸಂಸ್ಕೃತಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ದಕ್ಷಿಣ ರಾಜ್ಯಗಳ ತಜ್ಞರು, ಮಹಿಳೆಯರ ಕಡೆಗಣನೆ- ಕುಮಾರಸ್ವಾಮಿ ಪ್ರಶ್ನೆ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.

ಭಾರತ ಸಂಸ್ಕೃತಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ದಕ್ಷಿಣ ರಾಜ್ಯಗಳ ತಜ್ಞರು, ಮಹಿಳೆಯರ ಕಡೆಗಣನೆ- ಕುಮಾರಸ್ವಾಮಿ ಪ್ರಶ್ನೆ
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.

ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾ ರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿ ಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದ ವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಕಿಡಿಕಾರಿದ್ದಾರೆ.

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.