ರಾಜ್ಯ

ಮೇಕೆದಾಟು ಯೋಜನೆ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌

ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

ಮೇಕೆದಾಟು ಯೋಜನೆ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ‌
ರಮೇಶ್ ಜಾರಕಿಹೊಳಿ
Published On :

ನವದೆಹಲಿ: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.

ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿಂದು ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು.

ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ‌ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.