ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿಕೆ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕಳೆದ ಆರು ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ಎಂದು ದೇಶದ ಯುವ ಜನತೆ ಕೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಆರಂಭಿಸಿರುವ ಅಭಿಯಾನವನ್ನು ಬೆಂಬಲಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


