ದೆಹಲಿ: ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ
ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಈ ಕಾಮಗಾರಿಯು ರೂ.87 ಕೋಟಿ ವೆಚ್ಚದಾಗಿದ್ದು ರಾಜ್ಯದಿಂದ ಬರುವ ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕಾಗಿ ನಿರ್ಮಾಣ ಮಾಡಲಾಗುತ್ತಿದೆ.
ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಂತಾದವರು ಉಪಸ್ಥಿತರಿದ್ದರು.
ಸಿಎಂ ಬಿಎಸ್ ವೈ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


