ಡ್ರಗ್ಸ್ ಮಾಫಿಯಾ ಪ್ರಕರಣ: ಜೈಲಿನಲ್ಲಿ ನಿದ್ರೆಯಿಲ್ಲದೆ ಕಾಲ ಕಳೆದ ನಟಿ ಸಂಜನಾ
ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದಜ ನಂಟು ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿ ಜೈಲು ಸೇರಿರುವ ನಟಿ ಸಂಜನಾ ಅವರು ಜೈಲಿನಲ್ಲಿ ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದಜ ನಂಟು ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿ ಜೈಲು ಸೇರಿರುವ ನಟಿ ಸಂಜನಾ ಅವರು ಜೈಲಿನಲ್ಲಿ ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಜೈಲಿನಲ್ಲಿ ಸೊಳ್ಳೆ ಕಾಟ ಹೆಚ್ಚಾಗಿದ್ದು, ಸೊಳ್ಳೆ ಪರದೆ ನೀಡುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಜೈಲಿನಲ್ಲಿ ಅಂತಹ ವ್ಯವಸ್ಥೆಗಳನ್ನು ಕಲ್ಪಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ನಿರಾಕರಿಸಿದ್ದಾರೆಂದು ಹೇಳಲಾಗುತ್ತಿದೆ.
ಪರಪ್ಪನ ಅಗ್ರಹಾ ಕೇಂದ್ರ ಕಾರಾಗೃಹದಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಇಬ್ಬರೂ ಒಂದೇ ಸೆಲ್ ನಲ್ಲಿದ್ದಾರೆ. ಒಂದೇ ಸೆಲ್ ನಲ್ಲಿದ್ದರೂ ಇಬ್ಬರೂ ಅಷ್ಟಾಗಿ ಮಾತನಾಡುತ್ತಿಲ್ಲ ಎಂದು ಹೇಳಲಾಗುತ್ತಿದೆ. ರಾಗಿಣಿಯವರು ಪುಸ್ತಕ ಓದುವುದರಲ್ಲಿ ತಮ್ಮ ಕಾಲವನ್ನು ಕಳೆಯುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೊಳಪಟ್ಟ ನಟಿ ಐಂದ್ರಿತಾ ರೈ ಅವರು ತಮ್ಮ ನಿವಾಸದ ಬಳಿಯೇ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವು ಸಿಸಿಬಿ ಪೊಲೀಸರ ತನಿಖೆಗೆ ಸಹಕಾರ ನೀಡುತ್ತಿದ್ದೇವೆ. ಪ್ರಕರಣ ಸಂಬಂಧ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಿಸಿಬಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇವೆ. ಯಾವಾಗಲೇ ಅಧಿಕಾರಿಗಳು ವಿಚಾರಣೆಗೆ ಕೂಗಿದರೂ ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


