ಬಿಬಿಎಂಪಿ ಮಾಜಿ ಸದಸ್ಯ ಎಂ.ನಾಗರಾಜ್ ಕೋವಿಡ್ ನಿಂದ ನಿಧನ
ಬಿಬಿಎಂಪಿ ಮಾಜಿ ಸದಸ್ಯ ಎಂ. ನಾಗರಾಜ್ ಕೋವಿಡ್ ನಿಂದ ನಿಧನರಾಗಿದ್ದಾರೆ.

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ಎಂ. ನಾಗರಾಜ್ ಕೋವಿಡ್ ನಿಂದ ನಿಧನರಾಗಿದ್ದಾರೆ.
ಎರಡು ಬಾರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದ ನಾಗರಾಜ್ ಅವರಿಗೆ ಕೋವಿಡ್ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
2001ರಲ್ಲಿ ಕುರುಬರಹಳ್ಳಿ, 2010ರಲ್ಲಿ ನಂದಿನಿ ಲೇಔಟ್ ವಾರ್ಡ್ ಗಳಿಂದ ಪಾಲಿಕೆಗೆ ಆಯ್ಕೆಯಾಗಿದ್ದ ನಾಗರಾಜ್ ಲೆಕ್ಕಪತ್ರ ಸ್ಥಾಯಿ ಸಮಿತಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ನಾಗರಾಜ್ 2015ರಲ್ಲಿ ಸಹ ನಂದಿನಿ ಲೇಔಟ್ ವಾರ್ಡ್ ನಿಂದ ಬಿಬಿಎಂಪಿಗೆ ಸ್ಪರ್ಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


