ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣ: ಮತ್ತಷ್ಟು ನಟ-ನಟಿಯರು, ಗಣ್ಯರ ಮೇಲೆ ಸಿಸಿಬಿ ಕಣ್ಣು
ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದ ನಂಟು ಸಂಬಂಧ ಇಬ್ಬರು ನಟಿಯರು ಹಾಗೂ ಸ್ಟಾರ್ ದಂಪತಿ ಬಳಿಕ ಮತ್ತಷ್ಟು ನಟ-ನಟಿಯರು ಹಾಗೂ ಗಣ್ಯರಿಗೂ ಶೀಘ್ರದಲ್ಲಿಯೇ ಸಂಕಷ್ಟ ಎದುರಾಗಲಿದೆ.

ಬೆಂಗಳೂರು: ಚಿತ್ರರಂಗದಲ್ಲಿನ ಮಾದಕ ವಸ್ತು ಮಾರಾಟ ಜಾಲದ ನಂಟು ಸಂಬಂಧ ಇಬ್ಬರು ನಟಿಯರು ಹಾಗೂ ಸ್ಟಾರ್ ದಂಪತಿ ಬಳಿಕ ಮತ್ತಷ್ಟು ನಟ-ನಟಿಯರು ಹಾಗೂ ಗಣ್ಯರಿಗೂ ಶೀಘ್ರದಲ್ಲಿಯೇ ಸಂಕಷ್ಟ ಎದುರಾಗಲಿದೆ.
ಪ್ರಕರಣ ಸಂಬಂಧ ಈಗಾಗಲೇ ಬಂಧನಕ್ಕೊಳಪಡಿಸಲಾಗಿರುವ ವೀರೇನ್ ಖನ್ನಾ ಎಂಬಾತನನ್ನು ಸಿಸಿಬಿ ಪೊಲೀಸರುವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಸ್ಫೋಟ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆಂದು ಹೇಳಲಾಗುತ್ತಿದೆ.
ಡ್ರಗ್ಸ್ ಪಾರ್ಟಿಗಳ ಕುರಿತು ವಿಐಪಿಗಳ ಮೊಬೈಲ್ ಗಳಿಗೆ ಆರೋಪಿ ಆಹ್ವಾನ ಸಂದೇಶಗಳನ್ನು ರವಾನಿಸುತ್ತಿದ್ದ. ಈವರೆಗೂ ಯಾರು ಯಾರು ಆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂಬುದರ ಕುರಿತು ಆರೋಪಿ ಅಧಿಕಾರಿಗಳ ಬಳಿ ಬಾಯ್ಬಿಟ್ಟಿದ್ದಾನೆಂದು ಹೇಳಲಾಗುತ್ತಿದೆ.
ಈಗಾಗಲೇ ಪ್ರಕರಣ ಸಂಬಂಧ ಹಿರಿಯ ನಟರೊಬ್ಬರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ನಡುವೆ ಈಗಾಗಲೇ ಸಿಸಿಬಿ ಪೊಲೀಸರಿಂದ ವಿಚಾರಣೆಗೊಳಪಟ್ಟ ಸ್ಟಾರ್ ದಂಪತಿಗಳ ಕುರಿತಂತೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. 2017ರಲ್ಲಿ ಜಯನಗರ ಪೊಲೀಸರಿಗೆ ಸ್ಟಾರ್ ದಂಪತಿಗಳು ಸಿಕ್ಕಿಬಿದ್ದಿದ್ದರು. ಆದರೆ, ಬಲವಾದ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ಹೇಳಲಾಗುತ್ತಿದೆ.
ಡ್ರಗ್ಸ್ ಸೇವನೆ ಮಾಡಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದ ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ, ಘಟನೆ ಸಂಬಂಧ ಪೊಲೀಸರು ಯಾವುದೇ ಪ್ರಕರಣಗಳನ್ನೂ ದಾಖಲಿಸಿಕೊಂಡಿರಲಿಲ್ಲ. ಈ ನಟರು ತನ್ನ ಸಹೋದರನನ್ನೂ ಕೂಡ ವಿಟ್ಠಲ್ ಮಲ್ಯಾ ರಸ್ತೆಯಲ್ಲಿ ನಡೆದಿದ್ದ ಪಾರ್ಟಿಗೆ ಕರೆದುಕೊಂಡು ಹೋಗಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ವಿಚಾರಣೆ ವೇಳೆ ಆರೋಪಿ ರವಿಶಂಕರ್ ಕೂಡ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದ ಕೆಲ ರಾಜಕೀಯ ನಾಯರ ಪುತ್ರರ ಹೆಸರನ್ನೂ ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದ್ದು, ಈಗಾಗಲೇ ಪೊಲೀಸರು ಅವರಿಗೋ ನೋಟಿಸ್ ಜಾರಿ ಮಾಡಿದ್ದು, ಈ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


