ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ
ಕನ್ನಡದ ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ತಡರಾತ್ರಿ ನಿಧನ ಹೊಂದಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಬಹು ಅಂಗಾಂಗ ವೈಫಲ್ಯ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಸ್ವಲ್ಪ ಚೇತರಿಕೆ ಕಂಡುಬಂದಿದ್ದರೂ ಮತ್ತೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ನಿಧನ ಹೊಂದಿದ್ದಾರೆ.
ಇವರು ಟೈಮ್ಸ್ ಆಫ್ ಇಂಡಿಯಾ, ವಿಜಯ ಕರ್ನಾಟಕ, ಜನಶ್ರೀ, ಟಿವಿ 9 ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ದುಡಿದಿದ್ದರು. ಪತ್ರಕರ್ತರಲ್ಲದೆ ರಂಗಭೂಮಿಯಲ್ಲೂ ನಟನೆ ಮೂಲಕ ಹಲವು ಹವ್ಯಾಸಿ ರಂಗ ತಂಡಗಳ ಜೊತೆಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ನಾಗರಾಜ್ ದೀಕ್ಷಿತ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ರವರ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ, ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ನಾಗರಾಜ್ ದೀಕ್ಷಿತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


