ವಿಜಯನಗರ ಜಿಲ್ಲೆ ರಚನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ
ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಬೆಂಗಳೂರು: ವಿಜಯನಗರ ಜಿಲ್ಲೆ ರಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆಯ ವಿಷಯವನ್ನು ಮಂಡಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಪ್ರಸ್ತುತ ಬಳ್ಳಾರಿ ಜಿಲ್ಲೆಯು ತುಂಬಾ ವಿಸ್ತಾರವಾಗಿದ್ದು,ಒಟ್ಟು 11 ಕಂದಾಯ ತಾಲ್ಲೂಕುಗಳನ್ನು ಹಾಗೂ 3 ಕಂದಾಯ ಉಪ ವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆ ಎನಿಸಿಕೊಂಡಿದೆ.
ಜಿಲ್ಲೆಯ ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರ ಸ್ಥಾನದಿಂದ 200 ಕಿ.ಮೀ. ಅಂತರದಲ್ಲಿರುವುದರಿಂದ ಈ ಭಾಗದ ರೈತರಿಗೆ, ಬಡವರಿಗೆ,ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ದುಸ್ತರವಾಗಿದೆ.
ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲ್ಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ ಈ ತಾಲೂಕುಗಳನ್ನು ಹೊರತುಪಡಿಸಿ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿ ನೂತನ ವಿಜಯನಗರ ಜಿಲ್ಲೆಯನ್ನು ರಚಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ರಚನೆಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


