ಬ್ಯಾಗ್ ನಲ್ಲಿ ಪಿಸ್ತೂಲ್ ಪತ್ತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಸಿಐಎಸ್ಎಫ್ ಭದ್ರತಾ ಪರಿಶೀಲನೆಯ ಸಮಯದಲ್ಲಿ, ಪಿಸ್ತೂಲ್ ಅನ್ನು ಚೀಲದಲ್ಲಿ ಇಟ್ಟುಕೊಂಡಿರುವುದು ಪತ್ತೆಯಾಗಿದೆ.
ಗೋವಾಕ್ಕೆ ತೆರಳುವ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಸ್ನೋಟಿಕರ್ ಅವರನ್ನು ಸಿಬ್ಬಂದಿಗಳು ಪರಿಶೀಲಿಸಿದಾಗ ಪಿಸ್ತೂಲ್ ಸಿಕ್ಕಿದೆ.
ಘಟನೆಯನಂತರ ಸಿಐಎಸ್ಎಫ್ ಸಿಬ್ಬಂದಿ ಅಸ್ನೋಟಿಕರ್ ಅವರನ್ನು ವಶಕ್ಕೆ ತೆಗೆದುಕೊಂಡರು ಮತ್ತು ತನಿಖೆ ಕೈಗೊಂಡಿದ್ದಾರೆ.
ಮಾಜಿ ಸಚಿವ ಅಸ್ನೋಟಿಕರ್ ಭದ್ರತಾ ಸಿಬ್ಬಂದಿಗೆ ತಮ್ಮಬಳಿ ಪಿಸ್ತೂಲಿನ ಪರವಾನಗಿ ಇರುವುದಾಗಿ ತಿಳಿಸಿದ್ದಾರೆ. ತಾನೊಬ್ಬ ಉದ್ಯಮಿಯಾಗಿದ್ದು ಆತ್ಮರಕ್ಷಣೆಗಾಗಿ ಪಿಸ್ತೂಲನ್ನು ಇರಿಸಿಕೊಂಡಿದ್ದಾಗಿ ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


