ರಾಜ್ಯ

ಡ್ರಗ್ ಕೇಸ್: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8 ಗಂಟೆಗಳ ಕಾಲ ಸಿಸಿಬಿ ಡ್ರಿಲ್

ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಡ್ರಗ್ ಕೇಸ್: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8 ಗಂಟೆಗಳ ಕಾಲ ಸಿಸಿಬಿ ಡ್ರಿಲ್
ಯುವರಾಜ್ - ಅಕುಲ್ ಬಾಲಾಜಿ - ಸಂತೋಷ್
Published On :

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಶುಕ್ರವಾರ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಈ ಮೂವರು ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದಿದ್ದರು.

ಸತತ 8 ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಕುಲ್ ಬಾಲಾಜಿ, ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದಿದ್ದಾರೆ.

ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ಸಂತೋಷ್ ಹಾಗೂ ಅಕುಲ್ ಬಾಲಾಜಿ ಮಾಧ್ಯಮಗಳ ಜೊತೆ ಮಾತನಾಡಿ, ವಿಚಾರಣೆಗೆ ಕರೆದರೆ ಮತ್ತೆ ಬರುವುದಾಗಿ ಹೇಳಿದ್ದಾರೆ. ಆದರೆ ಯುವರಾಜ್ ಅವರನ್ನು ಮಾತ್ರ ಅವರ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಬಂದು ಕರೆದೊಯ್ದಿದ್ದಾರೆ. ಮಾಧ್ಯಮಗಳ ಕ್ಯಾಮೆರಾ ಮ್ಯಾನ್ ಗಳನ್ನು ತಳ್ಳಿ ಯುವರಾಜ್ ನನ್ನು ಬೆಂಬಲಿಗರು ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಯುವರಾಜ್ ನೀಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.