ಮಂಡ್ಯ: ಗ್ರಾಮದ ಮಧ್ಯೆಯೇ ಯುವಕನ ಬರ್ಬರ ಹತ್ಯೆ!
ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(೨೫) ಕೊಲೆಯಾದ ಯುವಕ.

ಮಂಡ್ಯ: ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಗ್ರಾಮದ ಪೂಜಾರಿ ಮಂಜಣ್ಣ ಎಂಬುವರ ಮಗ ಅಭಿಷೇಕ್(೨೫) ಕೊಲೆಯಾದ ಯುವಕ.
ಶನಿವಾರ ರಾತ್ರಿ ೧೦ ಗಂಟೆಗೆ ಮನೆಗೆ ಬಂದ ಅಭಿಷೇಕ್ಗೆ ತಾಯಿ ಊಟ ಬಡಿಸಿದ್ದಾರೆ. ಊಟ ಮಾಡುತ್ತಿದಂತೆ ಯಾರೋ ಪೋನ್ ಮಾಡಿದ್ದಾರೆ. ಬಳಿಕ ಎಂದಿನಂತೆ ರೇಷ್ಮೆ ಸಾಕಣೆ ಮನೆಯಲ್ಲಿ ಮಲಗುವುದಾಗಿ ಹೇಳಿ ಹೊರ ಹೋದವನನ್ನು ಯಾರೊ ದುಷ್ಕರ್ಮಿಗಳು ತಲೆಯ ಭಾಗಕ್ಕೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮುಂಜಾನೆ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದವರಿಗೆ ಯುವಕನ ಕೊಲೆಯಾಗಿರುವುದು ತಿಳಿದಿದೆ.
ಅಭಿಷೇಕ್ ಸದಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದ. ಹೆತ್ತವರು ಎಷ್ಟೇ ಬುದ್ಧಿವಾದ ಹೇಳಿದರೂ ಸ್ನೇಹಿತರ ಸಹವಾಸದಿಂದ ದೂರವಾಗಿರಲಿಲ್ಲ. ಶನಿವಾರವೂ ಬೆಳಗ್ಗೆ ಮನೆಯಿಂದ ಹೋದನು ರಾತ್ರಿ ೧೦ ಗಂಟೆಗೆ ಬಂದಿದ್ದ. ರೇಷ್ಮೆ ಸಾಕಾಣಿಕೆ ಮನೆಗೆ ಮಲಗಲು ಹೋದವನನ್ನು ಯಾರೋ ಸ್ನೇಹಿತರೇ ಕರೆಸಿಕೊಂಡು ಕೊಲೆ ಮಾಡಿರಬಹುದು ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಗ್ರಾಮದ ಮಧ್ಯ ಭಾಗದಲ್ಲೇ ನಡೆದ ಕೊಲೆಯಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕೆ ಪಿಎಸ್ಐ ಮಹೇಶ್, ಸಬ್ ಇನ್ಸ್ಪೆಕ್ಟರ್ ಚಂದ್ರಹಾಸನ್ ನಾಯ್ಕ್ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಕೆರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


