ಕೋವಿಡ್-19 ಚೇತರಿಸಿಕೊಂಡವರ ದೂರಗಾಮಿ ಆರೋಗ್ಯ ಪರಿಣಾಮದ ಅಧ್ಯಯನ: ಡಾ.ಕೆ. ಸುಧಾಕರ್
ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ದೂರಗಾಮಿ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ದೂರಗಾಮಿ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋಂಕಿನಿಂದ ಗುಣಮುಖರಾದವರ ಆರೋಗ್ಯ ಸ್ಥಿತಿಗತಿಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲಾಗುವುದು. ಲಘು ಮತ್ತು ತೀವ್ರ ರೋಗ ಲಕ್ಷಣ ಹೊಂದಿದ್ದವರಿಗೆ ಮುಂಬರುವ ದಿನಗಳಲ್ಲಿ ಕಂಡು ಬರಬಹುದಾದ ಆರೋಗ್ಯ ಸಮಸ್ಯೆಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.
ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆ ಹೊಂದಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲಾಗುವುದು. ಈ ಕುರಿತ ವರದಿ ಆಧಾರದ ಮೇಲೆ ಕೋವಿಡ್-೧೯ ಸೋಂಕಿತರ ದೂರಗಾಮಿ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೂತನ ಚಿಕಿತ್ಸಾ ಪದ್ದತಿಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


