ರಾಜ್ಯ

ಮೂರು ದಿನದಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ: ಸಿಎಂ ಬಿಎಸ್ ಯಡಿಯೂರಪ್ಪ

ಮೂರು ದಿನದಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮೂರು ದಿನದಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ: ಸಿಎಂ ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಮೂರು ದಿನದಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ ಶಾಸಕರೊಂದಿಗೆ, ಸಚಿವರೊಂದಿಗೆ ಮಾತನಾಡಿದ್ದು, ಮೂರು ದಿನಗಳಲ್ಲಿ ಅಧಿವೇಶನ ಮುಕ್ತಾಯಗೊಳಿಸಲು ನಿರ್ಧರಿಸಿದ್ದೇವೆ. ಸಾಕಷ್ಟು ಶಾಸಕರು ಈಗಾಗಲೇ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಸುಮಾರು 50  ರಿಂದ 60 ಶಾಸಕರು ಸದನಕ್ಕೆ ಗೈರಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಅಂತೆಯೇ ಸದನಕ್ಕೆ ಹಾಜರಾಗುವ ಶಾಸಕರೇ ಚರ್ಚೆ ನಡೆಸಲಿದ್ದಾರೆ. ನಾವು ಮೂರು ದಿನದಲ್ಲೇ ಸದನ ಮುಕ್ತಾಯಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಸಿಎಂ ಹೇಳಿದರು.

ಕಳೆದ 10 ದಿನಗಳಲ್ಲಿ 6 ಸಚಿವರು ಕೊರೋನಾ ಸೋಂಕಿಗೆ ತುತ್ತಾಗಿದ್ದು, ಇದಲ್ಲದೆ ಕೆಲ ಶಾಸಕರು, ಮೇಲ್ಮನೆ ಸದಸ್ಯರೂ ಕೂಡ ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ಮತ್ತೆ ಹಲವು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.