ರಾಜ್ಯ

ಶಾಸಕ ಬಿ.ಕೆ. ಸಂಗಮೇಶ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಶಾಸಕ ಬಿ.ಕೆ. ಸಂಗಮೇಶ್ ಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಶಾಸಕರ ಮನೆಯ ಕೆಲಸದವರಲ್ಲಿ ಕೊರೊನಾ ವೈರಸ್ ಸೋಂಕು ಕಂಡುಬಂದ ಕಾರಣ, ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಇದರಿಂದ ಶಾಸಕರಿಗೂ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಶಾಸಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಶಾಸಕ ಬಿ.ಕೆ. ಸಂಗಮೇಶ್ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಪ್ರತಿಯೊಬ್ಬ ಶಾಸಕರಿಗೂ ಕೋವಿಡ್-19 ಪರೀಕ್ಷೆ ಕಡ್ಡಾಯವಾಗಿದೆ,  ಹಲವು ಜನಪ್ರತಿನಿಧಿಗಳಿಗೆ ಈಗಾಗಲೇ ಕೊರೋನಾ ಸೋಂಕು ತಗುಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.