ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ
ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ.
ಈಗಾಗಲೇ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ತಯಾರಿಸಿ ಶಿಗ್ಗಾಂವಿ ನಗರದ ಹೊರವಲಯದಲ್ಲಿ ಇಡಲಾಗಿದ್ದು ಅನುಮತಿ ಆದೇಶ ಬಂದ ತಕ್ಷಣ ನಗರದಲ್ಲಿ ಮೂರ್ತಿ ಸ್ಥಾಪನೆಗೆ ಕೂಡಲೇ ಎಲ್ಲ ಕ್ರಮ ಜರಗಿಸಲಾಗುವುದು ಎಂದಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ಸ್ವಾತಂತ್ರ್ಯ ಸೇನಾನಿ ಮಹಿಳೆಯಾಗಿದ್ದು ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ಹೋರಾಟ ತ್ಯಾಗ ಇಂದಿನ ಯುವಜನಾಂಗಕ್ಕೆ ಸ್ಪೂರ್ತಿಯಾಗಿದೆ. ಆದುದರಿಂದ ಎಲ್ಲ ಜನಸಮೂಹ ಒಟ್ಟಾಗಿ ಇದರಲ್ಲಿ ಪಾಲ್ಗೊಳ್ಳಲು ವಿನಂತಿಸುತ್ತೇನೆ ಎಂದು ಅವರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


