ಕುಡಿದ ಅಮಲಿನಲ್ಲಿ ನೇಣಿಗೆ ಶರಣಾದ ಯುವಕ
ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ: ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದ ಚಿಕ್ಕನಾಯಕರ ಬೀದಿ ನಿವಾಸಿ ಸಂತೋಷ (22) ಮೃತ ದುರ್ದೈವಿ. ದಿನಬೆಳಗಾದರೆ ಮಧ್ಯದ ಮೊರೆಹೋಗುತ್ತಿದ್ದ ಈತ ದಿನವಿಡೀ ಕುಡಿಯುತ್ತಿದ್ದ ಎನ್ನಲಾಗಿದೆ.
ನಿನ್ನೆ ಸಂಜೆ ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಕುಡಿದ ಅಮಲಿನಲ್ಲಿ ಸೀರೆ ಬಳಸಿ ನೇಣಿಗೆ ಕೊರೊಳೊಡ್ಡಿ ಮೃತಪಟ್ಟಿದ್ದಾನೆ.
ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಮೃತದೇಹವನ್ನು ನೀಡಲಾಯಿತು.
ವರದಿ: ಗುಳಿಪುರ ನಂದೀಶ ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


